ಧಾರವಾಡ

ಅನಿಲ ದರ ಏರಿಕೆ: ಬಿಜೆಪಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜ. 8
ಅಡುಗೆ ಅನಿಲ ಹಾಗೂ ಆಟೋ ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಮಹಾನಗರ ಜಿಲ್ಲಾ ಬಿಜೆಪಿ ಮಹಿಳಾ ಕಾರ್ಯಕರ್ತರು ನಗರದಲ್ಲಿ ಬುಧವಾರ ರಸ್ತೆ ಮಧ್ಯೆ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಚನ್ನಮ್ಮ ವೃತ್ತದ ಬಳಿ ರಸ್ತೆ ಮಧ್ಯೆ ಸಿಲಿಂಡರ್ ಬದಿಗಿಟ್ಟು ಕಟ್ಟಿಗೆ ಮೂಲಕ ಒಲೆ ಹಚ್ಚಿದ ಕಾರ್ಯಕರ್ತರು, ಅಡುಗೆ ಅನಿಲ ಏರಿಕೆಯಿಂದ ಬಡ ಹಾಗೂ ಮಧ್ಯಮ ಕುಟುಂಬದವರು ಅಡುಗೆ ಮಾಡುವುದು ಕಷ್ಟಕರವಾಗಿದೆ ಎಂದು ದೂರಿದರು.
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ನಿತ್ಯೋಪಯೋಗಿ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿವೆ. ಇದರಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಡುಗೆ ಅನಿಲ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಕಳೆದ ಹತ್ತು ವರ್ಷಗಳಲ್ಲಿ ಹಲವಾರು ಪಟ್ಟು ಏರಿದೆ. ದೇಶದ ಆರ್ಥಿಕ ಸ್ಥಿತಿಯೂ ಸಂಕಷ್ಟದಲ್ಲಿದ್ದು, ಜನಜೀವನ ಕಷ್ಟಕರವಾಗಿದೆ ಎಂದು ದೂರಿದರು. ಆಟೋ ಗ್ಯಾಸ್ ಏರಿಕೆಯಿಂದಲೂ ಬಡ ಆಟೋ ಚಾಲಕರು ಜೀವನ ನಡೆಸುವುದು ಕಷ್ಟವಾಗಿದೆ. ಆಟೋ ಗ್ಯಾಸ್ ಬೆಲೆಯಲ್ಲಿ ಏಕಾಏಕಿ ರು. 11.50ರಷ್ಟು ಏರಿಕೆ ಮಾಡಿದ್ದು, ಚಾಲಕರಿಗೆ ನುಂಗಲಾರದ ತುತ್ತಾಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರದಿಂದ ದೇಶದ ಆರ್ಥಿಕ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಸದ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಮೇಯರ್ ರಾಧಾಬಾಯಿ ಸಫಾರೆ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.