ಐಟಿಐ ಸೆಮಿಸ್ಟರ್ ಪದ್ಧತಿ ಕೈಬಿಡಲು ಆಗ್ರಹ: ಪ್ರತಿಭಟನೆ
ಹುಬ್ಬಳ್ಳಿ: ಐಟಿಐಗಳಲ್ಲಿ ನಡೆಸುವ ಕುಶಲಕರ್ಮಿ ತರಬೇತಿಯಲ್ಲಿ ಏಕಾಏಕಿ ಜಾರಿಗೊಳಿಸಿರುವ ಸೆಮಿಸ್ಟರ್ ಪದ್ಧತಿಯನ್ನು ರದ್ದುಗೊಳಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಆರ್ಗನೈಸೇಷನ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಮಿನಿ ವಿಧಾನಸೌಧದವರೆಗೆ ಮೆರವಣಿಗೆ ನಡೆಸಿದರು. ಕಳೆದ ಆಗಸ್ಟ್‌ನಲ್ಲಿ ಪ್ರವೇಶ ಪ್ರಕ್ರಿಯೆ ಬಹುಪಾಲು ಮುಗಿದ ಮೇಲೆ ಐಟಿಐನ ದೀರ್ಘಕಾಲೀನ ಬೋಧನಾ ಪದ್ಧತಿ ಹಾಗೂ ತರಬೇತಿ ಬದಲಾಯಿಸಿ ಯಾವುದೇ ಸರಿಯಾದ ಸಮಾಲೋಚನೆ ನಡೆಸದೇ ಸೆಮಿಸ್ಟರ್ ಪದ್ಧತಿಯನ್ನು ಅವೈಜ್ಞಾನಿಕವಾಗಿ ದೀಢೀರನೆ ಹೇರಲಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದರು. ಪಠ್ಯ ಕ್ರಮವನ್ನು ಸೆಮಿಸ್ಟರ್ ಪದ್ಧತಿಗೆ ಬದಲಾಯಿಸುವ ಅಗತ್ಯತೆಯ ಬಗ್ಗೆ ಡೈರೆಕ್ಟರ್ ಜನರಲ್ ಆಫ್ ಎಂಪ್ಲಾಯ್‌ಮೆಂಟ್ ಆ್ಯಂಡ್ ಟ್ರೇನಿಂಗ್ ಕಚೇರಿಯವರು ಯಾವುದೇ ಸಕಾರಣ ನೀಡಿಲ್ಲ. ಇದು ಅತ್ಯಂತ ಬೇಜವಾಬ್ದಾರಿ ಹೇಳಿಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಪಠ್ಯಕ್ರಮ ಬದಲಾವಣೆಗೆ ಸಾಕಷ್ಟು ಸಮಯಾವಕಾಶ ನೀಡಿ, ತಜ್ಞರ ಹಾಗೂ ಎಲ್ಲ ಭಾಗೀದಾರರ ಅಭಿಪ್ರಾಯ ಸಂಗ್ರಹಿಸಿ ಮುಂದುವರೆಯಬೇಕು ಎಂದು ಆಗ್ರಹಿಸಿದರು. ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಹೊಸದಿಲ್ಲಿಯ ಡೈರೆಕ್ಟರ್ ಜನರಲ್ ಆಫ್ ಎಂಪ್ಲಾಯ್‌ಮೆಂಟ್ ಆ್ಯಂಡ್ ಟ್ರೇನಿಂಗ್‌ನ ಡೈರೆಕ್ಟರ್ ಜನರಲ್ ಅವರಿಗೆ ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

