ಧಾರವಾಡ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್‌ಗೆ ಅದ್ಧೂರಿ ಸ್ವಾಗತ

Published On :

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಥಮ ಬಾರಿಗೆ ಬುಧವಾರ ರಾತ್ರಿ ನಗರಕ್ಕೆ ಆಗಮಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ದಿನೇಶ ಗುಂಡೂರಾವ್ ಆವರಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.
ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಗುಂಡೂರಾವ್, ಅವಳಿ ನಗರದಲ್ಲಿ ತ್ವರಿತಗತಿಯಲ್ಲಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದರು.
ಅವಳಿನಗರದಲ್ಲಿ ಈವರೆಗೂ ಆಗಿರುವ ಹಾಗೂ ಆಗಬೇಕಿರುವ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿದಂತೆ ಗುರುವಾರ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದೆಂದ ಅವರು, ಮಹಾನಗರದ ಅಭಿವೃದ್ಧಿಗೆ ಪಕ್ಷಾತೀತವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಹು-ಧಾ ಮಹಾನಗರದೊಂದಿಗೆ ತಾವು ಸಾಕಷ್ಟು ಒಡನಾಟ ಹೊಂದಿದ್ದೇವೆ ಎಂದ ಸಚಿವ ಗುಂಡೂರಾವ್, ಈ ಭಾಗದ ಜನಪ್ರತಿನಿಧಿಗಳೆಲ್ಲರೂ ತಮ್ಮ ಆತ್ಮೀಯರಾಗಿದ್ದಾರೆ ಎಂದರು.
ಶಾಸಕರಾದ ಪ್ರಸಾದ ಅಬ್ಬಯ್ಯ, ನಾಗರಾಜ ಛಬ್ಬಿ, ಸಿ.ಎಸ್. ಶಿವಳ್ಳಿ, ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಎ.ಎಂ. ಹಿಂಡಸಗೇರಿ, ಸದಾನಂದ ಡಂಗನವರ, ರಾಜಾ ದೇಸಾಯಿ, ಮಹೇಂದ್ರ ಸಿಂಘಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.