ಧಾರವಾಡ

ಬೆಲೆ ಏರಿಕೆ: ಬಿಜೆಪಿ ಕಾರ್ಯಕರ್ತರ ಆಕ್ರೋಶ

Published On :

ಕುಂದಗೋಳ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರದ ಯುಪಿಎ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿ, ಬುಧವಾರ ಭಾರತೀಯ ಜನತಾ ಪಾರ್ಟಿ ತಾಲೂಕು ಘಟಕದ ಕಾರ್ಯಕರ್ತರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್, ಸೀಮೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಸಾಗಿದ್ದು ಶ್ರೀಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ದಿನನಿತ್ಯದ ವಸ್ತುಗಳು ಬಡವ ಹಾಗೂ ದೀನದಲಿತರ ಕೈಗೆ ಎಟಕುವಂತೆ ಲಭಿಸುವಂತೆ ಸರ್ಕಾರಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಮನವಿಯನ್ನು ತಹಸೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಅರ್ಪಿಸಲಾಯಿತು.  
ತಾಲೂಕು ಅಧ್ಯಕ್ಷ ಎನ್.ಎನ್.ಪಾಟೀಲ, ಬಸು ಕೊಪ್ಪದ, ಸತೀಶ ಪಾಟೀಲ, ಗಿರೀಶ ಹಂಚಿನಾಳ, ಬಸವರಾಜ ಗಂಗಾಯಿ, ದಾನಪ್ಪ ಗಂಗಾಯಿ, ಪೃಥ್ವಿ ಕಾಳೆ, ಉಮೇಶ ಬಿಡನಾಳ, ನಾಗನಗೌಡ ಸಾತ್ಮಾರ, ವಿಠ್ಠಲ ಚವ್ಹಾಣ,  ಹನಮಂತಗೌಡ ಪಾಟೀಲ, ಬಸವರಾಜ ರಟಗೇರಿ, ವಾಗೇಶ ಮಣಕಟ್ಟಿ, ಮಂಜು ಅಣ್ಣಿಗೇರಿ, ವಸಂತಗೌಡ ಮಂಡಿಗನಾಳ, ವಿರೂಪಾಕ್ಷಗೌಡ ಹುಡೇದ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.