ತಾಲೂಕಲ್ಲೂ ಅಹವಾಲು ಸ್ವೀಕಾರ: ಗುಂಡೂರಾವ್
ಹುಬ್ಬಳ್ಳಿ: ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ತಾಲೂಕು ಕೇಂದ್ರಗಳಿಗೆ ವಿಸ್ತರಿಸುವ ಜತೆಗೆ ಈ ಸಂದರ್ಭದಲ್ಲಿ ಅಧಿಕಾರಿ ವರ್ಗ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹೇಳಿದರು. ಹುಬ್ಬಳ್ಳಿ ಪ್ರವಾಸಿ ಗೃಹದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಬದಲು ಜನ ಸಂಪರ್ಕ ಸಭೆ ಮಾದರಿಯಲ್ಲಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅಹವಾಲು ಸ್ವೀಕರಿಸಿ ಸಾರ್ವಜನಿಕ ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸಲಾಗುವುದು. ಜಿಲ್ಲಾ ಕೇಂದ್ರದಲ್ಲಿ ಅಹವಾಲು ಸ್ವೀಕರಿಸದೆ ತಾಲೂಕು ಕೇಂದ್ರಗಳಿಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ವಿಸ್ತರಿಸಲಾಗುವುದು. ಇದರಿಂದ ತಾಲೂಕಿನ ಜನತೆ ತಮ್ಮನ್ನು ಹುಡುಕಿಕೊಂಡು ಜಿಲ್ಲಾ ಕೇಂದ್ರಕ್ಕೆ ಅಲೆದಾಡುವುದು ತಪ್ಪಲಿದೆ ಎಂದರು. ಗ್ರೌಂಡ್ ಬಚಾವೋ ಸಮಿತಿ ಹಾಗೂ ಜಿಮ್ಖಾನ್ ಕ್ಲಬ್ ಅಸೋಸಿಯೇಶನ್ ನೀಡಿದ ಪರ-ವಿರೋಧ ಮನವಿಯನ್ನು ಸ್ವೀಕರಿಸಿದರು. ಸ್ಟೇಶನ್ ರಸ್ತೆಯ ಅಂಬೇಡ್ಕರ್ ಪುತ್ಥಳಿ, ಸಂಗೊಳ್ಳಿ ರಾಯಣ್ಣ ಪುತ್ಥಳಿ, ಚೆನ್ನಮ್ಮ ಮೂರ್ತಿ, ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಮೂರುಸಾವಿರ ಮಠ, ಸಿದ್ಧಾರೂಢ ಮಠ, ಬಂಕಾಪುರ ಚೌಕ ದರ್ಗಾಕ್ಕೆ ಭೇಟಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

