ನಾಳೆ ವಿಶಾಲ ಜೈನ್ ಸಮ್ಮೇಳನ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜ. 10
ಭಾರತೀಯ ಜೈನ್ ಸಂಘಟನಾ (ಬಿಜೆಎಸ್) ರಾಜ್ಯ ಘಟಕದ ವತಿಯಿಂದ ನಗರದಲ್ಲಿ ಜ. 12ರಂದು 'ವಿಶಾಲ ಜೈನ್ ಸಮ್ಮೇಳನ' ಆಯೋಜಿಸಲಾಗಿದೆ.
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಬಿಜೆಎಸ್ ಸಲಹೆಗಾರ ಮಹೇಂದ್ರ ಸಿಂಘಿ, ಅಂದು ಬೆಳಗ್ಗೆ 9 ರಿಂದ ಸಂಜೆ 5ರ ವರೆಗೆ ಗೋಕುಲ ಗಾರ್ಡನ್ನಲ್ಲಿ ಈ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಪ್ರದೀಪ ಜೈನ್ ಆದಿತ್ಯ ಸಮ್ಮೇಳನ ಉದ್ಘಾಟಿಸುವರು. ಹಿರಿಯ ಪತ್ರಕರ್ತ ಗುಲಾಬಚಂದ ಕೊಠಾರಿ, ಗ್ರಾಮೀಣಾಭಿವೃದ್ಧಿ ಸಚಿವ ಎಚ್. ಕೆ. ಪಾಟೀಲ, ಯುವಜನ ಸೇವಾ ಸಚಿವ ಅಭಯಚಂದ್ರ ಜೈನ್ ಅತಿಥಿಗಳಾಗಿ ಪಾಲ್ಗೊಳ್ಳುವರು. ಬಿಜೆಎಸ್ ರಾಷ್ಟ್ರೀಯ ಅಧ್ಯಕ್ಷ ಶಾಂತಿಲಾಲ್ ಮುತ್ತಾ, ಪ್ರಫುಲ್ ಪರೇಖ, ಬಿಜೆಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಓಂಪ್ರಕಾಶ ಲುನಾವತ್, ದಿಲೀಪ ಸುರಾನಾ, ಧಾರವಾಡ ಎಸ್ಡಿಎಂ ಸೊಸೈಟಿ ಉಪಾಧ್ಯಕ್ಷ ಪ್ರೊ. ವಜ್ರಕುಮಾರ, ಡಾ. ಅಜಿತ ಪ್ರಸಾದ, ರಾಜೇಂದ್ರ ಲುಂಕರ್, ಕಮಲಕುಮಾರ ಜೈನ್ ಉಪಸ್ಥಿತರಿರುವರು.
ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಜೈನ್ ಸಮಾಜದ ವಿವಿಧ ಸಂಘ-ಸಂಸ್ಥೆಗಳ 2,500ಕ್ಕೂ ಹೆಚ್ಚು ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಗ್ರಾಮೀಣ ಪ್ರದೇಶದಿಂದಲೂ ಪ್ರತಿನಿಧಿಗಳು ಭಾಗವಹಿಸಲಿದ್ದಾರೆಂದು ಸಿಂಘಿ ತಿಳಿಸಿದರು.
ಜೈನ್ ಸಮುದಾಯವನ್ನು ಅಲ್ಪಸಂಖ್ಯಾತರ ವಿಭಾಗಕ್ಕೆ ಸೇರಿಸುವಂತೆ ಸಮ್ಮೇಳನದ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ವಿವಿಧ ವಿಷಯಗಳಿಗೆ ಸಂಬಂಧಿಸಿದ ಚರ್ಚೆಯೂ ನಡೆಯುವುದು. ಪ್ರಮುಖ ನಿರ್ಣಯಗಳನ್ನು ಇದೇ ಸಂದರ್ಭದಲ್ಲಿ ಕೈಗೊಳ್ಳಲಾಗುವುದು ಎಂದರು. ಗೌತಮ್ ಭಾಪಣಾ, ರಮೇಶ ಭಾಪಣಾ, ಮುಖೇಶ ಹಿಂಗ್ರೆ, ಮಹಾವೀರ ಕುಂದೂರ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

