ಧಾರವಾಡ

ಬೆನ್ನಿ ಹಿನ್ ಕಾರ್ಯಕ್ರಮಕ್ಕೆ ವಿರೋಧ

Published On :

ಹುಬ್ಬಳ್ಳಿ: ಬೆನ್ನಿ ಹಿನ್ಗೆ ರಾಜ್ಯಕ್ಕೆ ಬರಲು ಅವಕಾಶ ನೀಡದೇ ನಿಷೇಧ ಹೇರಬೇಕೆಂದು ಭಾರತ ಕ್ರಾಂತಿ ಸೇನಾ ಕಾರ್ಯಕರ್ತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಬೆನ್ನಿ ಹಿನ್ ಪ್ರತಿಕೃತಿ ದಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ, ಹಿಂದೂಗಳನ್ನು ಮತಾಂತರಗೊಳಿಸುವ ಉದ್ದೇಶದಿಂದ ಬೆನ್ನಿ ಹಿನ್ ಭಾರತಕ್ಕೆ ಇದೇ ಜ. 13ಕ್ಕೆ ಆಗಮಿಸುತ್ತಿದ್ದಾರೆ. ಮೌಢ್ಯತೆ ವಿರೋಧಿ ನೀತಿ ಜಾರಿಗೆ ತರಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಂಥವರಿಗೆ ಕೆಂಪು ಕಾರ್ಪೇಟ್ ಹಾಸಿ ಸ್ವಾಗತ ಕೋರುತ್ತಿರುವುದು ನಾಚಿಕೆಗೇಡು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ಈ ಕೂಡಲೇ ಬೆನ್ನಿ ಹಿನ್ ಕಾರ್ಯಕ್ರಮಕ್ಕೆ ನೀಡಿರುವ ಅವಕಾಶ ರದ್ದುಗೊಳಿಸಬೇಕು. ಇಲ್ಲದೇ ಹೋದಲ್ಲಿ ಕಾರ್ಯಕ್ರಮಕ್ಕೆ ಕ್ರಾಂತಿ ಸೇನೆಯ ಸಾವಿರಾರು ಕಾರ್ಯಕರ್ತರು ವಿರೋಧ ವ್ಯಕ್ತ ಪಡಿಸಲಿದ್ದಾರೆ. ಜತೆಗೆ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆಂದು ಎಚ್ಚರಿಸಿದರು. ಇದೇ ವೇಳೆ ಸರ್ಕಾರದ ನೀತಿ ಖಂಡಿಸಿ ಮೆರವಣಿಗೆ ನಡೆಸಿದ ಕ್ರಾಂತಿ ಸೇನೆ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು. ಬಸವಲಿಂಗ ಸ್ವಾಮೀಜಿ, ಬಸವರಾಜ ಸ್ವಾಮೀಜಿ, ಶ್ರೀನಿವಾಸ ಪೂಜಾರಿ, ವಿಶ್ವನಾಥ ಸೋಳಂಕಿ, ಪಾಲನಕರ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.