ಧಾರವಾಡ

ಅಕ್ರಮ ಮದ್ಯ ಮಾರಾಟ: ಸೆರೆ

Published On :

ಧಾರವಾಡ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದವರನ್ನು ಬಂಧಿಸಿ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟಬಾಗಿ ಬಸ್ ನಿಲ್ದಾಣ ಹತ್ತಿರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಸವರಾಜ ಚನ್ನಬಸಪ್ಪ ಕರ್ಚಕಟ್ಟಿಯನ್ನು ಬಂಧಿಸಲಾಗಿದ್ದು, ಆತನಿಂದ ರು. 2,050 ಮೌಲ್ಯದ ವಿವಿಧ ಕಂಪನಿಗಳ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲವಾಡ ಗ್ರಾಮದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಶಾಂತಪ್ಪ ರಾಮಪ್ಪ ಪರಡ್ಡಿಯನ್ನು ಬಂಧಿಸಿ ರು. 2,004 ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿ ತಡಹಳ ಗ್ರಾಮದ ಬಸ್ ನಿಲ್ದಾಣದಲ್ಲಿ ಬಾಬು ಫಕ್ಕೀರಪ್ಪ ಚಲವಾದಿಯನ್ನು ಬಂಧಿಸಿ ರು. 1,500 ಮೊತ್ತದ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.