ವೈಕುಂಠ ಏಕಾದಶಿ ವಿಶೇಷ ಪೂಜೆ
ಹುಬ್ಬಳ್ಳಿ: ವೈಕುಂಠ ಏಕಾದಶಿಯ ಅಂಗವಾಗಿ ಹುಬ್ಬಳ್ಳಿಯ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು.
ರಾಯಾಪುರದ ಇಸ್ಕಾನ್ ದೇವಸ್ಥಾನದಲ್ಲಿಯೂ ವಿಶೇಷ ಪೂಜೆ ನೆರವೇರಿತು. ರಾಧೆ-ಕೃಷ್ಣನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. 15 ಅಡಿ ಎತ್ತರ ಮತ್ತು 11 ಅಡಿ ಅಗಲದ ಬಂಗಾರ ವರ್ಣದ ವೈಕುಂಠ ದ್ವಾರವನ್ನು ದೇವಾಲಯದ ಮಹಾದ್ವಾರದಲ್ಲಿ ನಿರ್ಮಿಸಲಾಗಿತ್ತು. ಬೆಳಗ್ಗೆ 8ಕ್ಕೆ ವೈಕುಂಠ ದ್ವಾರ ಪೂಜೆ, 10 ಗಂಟೆ ಅನಂತರ ಲಕ್ಷ ಚರಣ ಸೇವೆ, ಸಂಜೆ 5ಕ್ಕೆ ವೆಂಕಟೇಶ್ವರ ಹೋಮ ನಡೆಯಿತು. 15 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು. ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮನ್ ನಾರಾಯಣನ ಮಹಿಮೆ ಕಥಾಪ್ರಸಂಗವನ್ನು ನೃತ್ಯ ಪಟು ಸಹನಾ ಭಟ್ ಮತ್ತು ತಂಡ ಪ್ರಸ್ತುತಪಡಿಸಿದರು.
ಮಾಯಾ ಚಿಕ್ಕೇರೂರ ಅವರಿಂದ ದಾಸವಾಣಿ ನಡೆಯಿತು. ಹುಬ್ಬಳ್ಳಿ-ಧಾರವಾಡ ಇಸ್ಕಾನ್ ಅಧ್ಯಕ್ಷ ರಾಜೀವಲೋಚನ ದಾಸ್ ಪ್ರವಚನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

