ಕ್ರಿಕೆಟ್: ಜೈ ಹನುಮಾನ್ ತಂಡ ಪ್ರಥಮ
ಧಾರವಾಡ: ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ನಿಮಿತ್ತ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಕುರುಬಗಟ್ಟಿಯ ಜೈ ಹನುಮಾನ್ ಕ್ರಿಕೆಟ್ ತಂಡಕ್ಕೆ ಲಭಿಸಿತು. ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ 16 ತಂಡಗಳು ಭಾಗವಹಿಸಿದ್ದವು. ಪಂದ್ಯಾವಳಿಯಲ್ಲಿ ಕುರುಬಗಟ್ಟಿ ಜೈ ಹನುಮಾನ ಕ್ರಿಕೆಟ್ ತಂಡವು, ಹೊನ್ನಾಪುರ ಗ್ರಾಮದ ತಂಡವನ್ನು ಸೋಲಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಯಿತು. ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಶ್ವರ ಶಿವಳ್ಳಿ, ಮುಖಂಡ ಅಶೋಕ ಮಸೂತಿ, ತಾಲೂಕು ಅಧ್ಯಕ್ಷ ಮಡಿವಾಳಪ್ಪ ಉಳವಣ್ಣವರ, ಅಳ್ನಾವರ ಮಂಡಳ ಅಧ್ಯಕ್ಷ ದಶರಥರಾವ್ ದೇಸಾಯಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸೋಮಶೇಖರ ಪಟ್ಟಣಶೆಟ್ಟಿ, ಬಸವರಾಜ ಶೆರೇವಾಡ, ಗುರುಪಾದಗೌಡ ಹನಮಂತಗೌಡ್ರ, ಬಸವರಾಜ ಮುದಕವಿ, ರಾಜು ಕುಸುಗಲ್ಲ, ಸೋಮು ಕೊಪ್ಪದ ಇದ್ದರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಭಾಜಿ ಜಾಧವ ಪ್ರಾಸ್ತಾವಿಕ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

