ಧಾರವಾಡ

18ರಿಂದ ಸಿದ್ಧಪ್ಪಜ್ಜನವರ ಪುಣ್ಯತಿಥಿ

Published On :

ಹುಬ್ಬಳ್ಳಿ:  ಉಣಕಲ್‌ನ ಶ್ರೀ ಸಾಯಿ ನಗರ ಸಿದ್ದಪ್ಪಜನವರ ಮೂಲಗದ್ದುಗೆ ಮಠದಲ್ಲಿ ಸಿದ್ದಪ್ಪಜ್ಜನವರ 93ನೇ ಪುಣ್ಯತಿಥಿ ನಿಮಿತ್ತ ಜ. 18ರಿಂದ 25ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳಲಾಗಿದ್ದು, ಜ. 24ರಂದು ರಥೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಿದ್ಧಪ್ಪಜ್ಜನವರ ಪುಣ್ಯತಿಥಿ ಕಾರ್ಯಕ್ರಮವನ್ನು ಮೂರುಸಾವಿರಮಠದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಉದ್ಘಾಟಿಸುವರು. ಸದ್ಗುರು ಸಿದ್ದಪ್ಪಜ್ಜನವರ ಮೂಲಗದ್ದುಗೆಮಠ ಉಣಕಲ್ ಇವರಿಂದ ಭಜನಾ ಸೇವಾ ಕಾರ್ಯಕ್ರಮ ನಡೆಯಲಿದೆ. 19ರಂದು ಗದಗ ಜಿಲ್ಲೆಯ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರ ಸಾನ್ನಿಧ್ಯದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಕುಂದಗೋಳ ತಾಲೂಕಿನ ಪಂಚಗ್ರಹ ಸಂಸ್ಥಾನ ಹಿರೇಮಠದ ಶಿಥಿಕಂಠೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು. 20ರಂದು ನಡೆಯುವ ಕಾರ್ಯಕ್ರಮಗಳ ಸಾನ್ನಿಧ್ಯವನ್ನು ಹುಬ್ಬಳ್ಳಿ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಸಿದ್ದೇಶ್ವರ ಭಜನಾ ಮಂಡಳಿ, ಹರಿಮಂದಿರ ಭಜನಾ ಮಂಡಳಿ ಇವರಿಂದ ಭಜನೆ ನಡೆಯಲಿದೆ.  
21ರಂದು ಹಾಲಗೇರಿ ಓಣಿಯ ಯಲ್ಲಮ್ಮದೇವಿ ಭಜನಾ ಮಂಡಳಿ, ಬಸವೇಶ್ವರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.  22ರಂದು ನಡೆಯುವ ಧಾರ್ಮಿಕ ವಿಧಿ-ವಿಧಾನಗಳ ಸಾನ್ನಿಧ್ಯವನ್ನು ರಾಯನಾಳದ ಮಹಾಂತ ರೇವಣಸಿದ್ದೇಶ್ವರ ಸ್ವಾಮೀಜಿ ವಹಿಸುವರು. ಜ. 24ರಂದು ಬ್ರಾಹ್ಮಿ ಮುಹೂರ್ತದಲ್ಲಿ ಕರ್ತೃ ಗದ್ದುಗೆಗೆ ಪೂಜೆ ನಡೆಯಲಿದ್ದು, ನಂತರ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚಣೆ ನಡೆಯಲಿವೆ. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 5ಕ್ಕೆ ಪಲ್ಲಕ್ಕಿ ಉತ್ಸವ ಮತ್ತು ರಥೋತ್ಸವ ನಡೆಯಲಿದೆ. 25ರಂದು ರಾತ್ರಿ 8ಕ್ಕೆ ಕಡುಬಿನ ಕಾಳಗ, ಸಂಗೀತ ಸೇವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.