ಸುದ್ದಿ ಸಂಕ್ಷೇಪ
ಇಂದಿನಿಂದ ಲೋಹ ಸಂಗ್ರಹ ಅಭಿಯಾನ
ಹುಬ್ಬಳ್ಳಿ: ಗುಜರಾತ್ನ ಸರ್ದಾರ್ ಸರೋವರದ ಬಳಿ ಪ್ರತಿಷ್ಠಾಪನೆಗೊಳ್ಳಲಿರುವ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಏಕತಾ ಪ್ರತಿಮೆಗೆ ಅಗತ್ಯವಿರುವ ಲೋಹ ಸಂಗ್ರಹಣಾ ಅಭಿಯಾನ ಜ. 15 ಮತ್ತು 16ರಂದು ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಮತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಆರಂಭವಾಗಲಿದೆ. ಜ. 15ರಿಂದ ಆರಂಭವಾಗುವ ಲೋಹ ಸಂಗ್ರಹ ಅಭಿಯಾನ 26ರವರೆಗೆ ನಡೆಯಲಿದ್ದು, ರಾಜ್ಯದ ಎಲ್ಲ 56 ಗ್ರಾಮಗಳಲ್ಲಿ ಲೋಹ ಸಂಗ್ರಹಿಸಲಾಗುವುದು ಎಂದು ಲೋಹ ಸಂಗ್ರಹಣ ಸಹಕಾರ ಸಮಿತಿ ರಾಜ್ಯ ಸಂಚಾಲಕ ಮುರುಗೇಶ ನಿರಾಣಿ ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ಲೋಹ ಸಂಗ್ರಹಣ ಸಮಿತಿ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿ ರೈತರು ಬಳಸಿದ ಲೋಹದ ತುಂಡುಗಳನ್ನು ಮತ್ತು ಪ್ರತಿಯೊಂದು ಗ್ರಾಮದ ಮಣ್ಣನ್ನು ಗುಜರಾತ್ನಿಂದ ಕಳುಹಿಸಿರುವ ಕಿಟ್ನಲ್ಲಿ ಸಂಗ್ರಹಿಸಿ ಗುಜರಾತ್ಗೆ ಕಳುಹಿಸಲಾಗುವುದು. ಲೋಹ ಸಂಗ್ರಹ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಸರ್ದಾರ ವಲ್ಲಭಬಾಯಿ ಅವರ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ದತ್ತಿ ಕಾರ್ಯಕ್ರಮ
ಧಾರವಾಡ: ವಿದ್ಯಾವರ್ಧಕ ಸಂಘದಿಂದ ಜ. 15ರಂದು ಸಂಜೆ 6ಕ್ಕೆ ಡಾ. ಆರ್.ಸಿ. ಹಿರೇಮಠ ದತ್ತಿ ಅಂಗವಾಗಿ ವಚನ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರವಾರ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಡಾ. ಸದಾಶಿವ ಮರ್ಜಿ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.
ಶಿಕ್ಷಣ ತಜ್ಞ ಶ್ಯಾಪೇಟಿ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಪ್ರಥಮ ಕುಲಸಚಿವ, ಶಿಕ್ಷಣ ತಜ್ಞ ಎಸ್.ಬಿ. ಶ್ಯಾಪೇಟಿ (95) ನಿಧನರಾದರು. ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಪ್ರಭುತ್ವ ಪಡೆದಿದ್ದ ದಿವಂಗತರು 12 ವರ್ಷ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕವಿವಿ ಪರೀಕ್ಷಾ ನಿಯಂತ್ರಣಾಧಿಕಾರಿಯಾಗಿ ಎರಡು ದಶಕಗಳ ಕಾಲ ಅಪೂರ್ವ ಸೇವೆ ಸಲ್ಲಿಸಿದ್ದರು. ನಿವೃತ್ತಿ ನಂತರವೂ ಅವರು ಹಲವು ಕೃತಿ ರಚಿಸಿದ್ದು ಮೌನ ಮಾತಾಡಿತು ಎಂಬ ಜೀವನ ಚರಿತ್ರೆ ಸಹ ಬರೆದಿದ್ದಾರೆ. ಮೃತರಿಗೆ ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಕವಿವಿ ಕುಲಪತಿ ಡಾ. ಎಚ್.ಬಿ. ವಾಲೀಕಾರ, ನಾಡೋಜ ಚನ್ನವೀರ ಕಣವಿ ಸೇರಿದಂತೆ ಹಲವು ಶಿಕ್ಷಣ ತಜ್ಞರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

