2 ಕೋಮಿನ ಮಧ್ಯೆ ಸಂಧಾನ
ಧಾರವಾಡ: ಕಮಲಾಪುರದಲ್ಲಿ ಎರಡು ಕೋಮಿನ ಮಧ್ಯೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಎರಡೂ ಕೋಮಿನ ಮುಖಂಡರು ಶನಿವಾರ ಸಂಧಾನ ಮಾಡಿಕೊಂಡಿದ್ದಾರೆ ಎಂದು ಶಾಸಕ ವಿನಯ ಕುಲಕರ್ಣಿ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಎರಡು ಕೋಮಿನ ಮಧ್ಯೆ ನಡೆದ ಗುಂಪು ಘರ್ಷಣೆಯನ್ನು ಮೂರನೇ ವ್ಯಕ್ತಿಗಳು ತಮ್ಮ ರಾಜಕೀಯ ದಾಳಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸಾಂಸ್ಕೃತಿಕ ನಗರದಲ್ಲಿ ಈ ರೀತಿಯ ಘಟನೆಗಳು ನಡೆದಿದ್ದಿಲ್ಲ. ಆದರೆ, ಕೆಲ ವ್ಯಕ್ತಿಗಳಿಂದ ಈ ರೀತಿಯ ಘಟನೆ ನಡೆದಿದೆ. ಇಂತಹ ಉದ್ವಿಗ್ನ ಪರಿಸ್ಥಿತಿಯಲ್ಲಿ ರಾಜಕಾರಣಿಗಳು ಮಧ್ಯಸ್ಥಿಕೆ ವಹಿಸಿ ಸಂಧಾನ ಮಾಡಬೇಕು. ಆದರೆ, ಈ ರೀತಿಯ ಪ್ರಚೋದನಕಾರಿ ಹೇಳಿಕೆ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಸದ್ಯ ಗಲಭೆ ನಡೆದ ಎರಡೂ ಕೋಮಿನವರು ರಾಜಿಪತ್ರ ಬರೆದುಕೊಟ್ಟಿದ್ದು, ಕಾನೂನು ಕ್ರಮದಲ್ಲಿ ಹೊಂದಾಣಿಕೆಯ ಮೂಲಕ ನ್ಯಾಯ ಬಗೆಹರಿಸಿಕೊಳ್ಳುತ್ತೇವೆ. ಅಲ್ಲದೇ ಎರಡೂ ಸಮಾಜದ ವತಿಯಿಂದ ಗಲಭೆಯಲ್ಲಿ ಗಾಯಗೊಂಡ ಬಾಲಕನಿಗೆ ಸಹಾಯ ನೀಡಲಾಗುತ್ತಿದೆ. ಹಬ್ಬಗಳ ನಿಮಿತ್ತ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಹಾಕುವ ಕುರಿತಂತೆ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯುವುದು, ಸಮಯದ ಮಿತಿಯಲ್ಲಿ ಧ್ವನಿವರ್ಧಕ ಹಚ್ಚುವುದು ಸೇರಿದಂತೆ ಇನ್ನಿತರ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲು ಆದೇಶಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ, ಮಹಾದೇವಪ್ಪ ಸಂಕೋಜಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

