ಗೋದಾಮಿನಲ್ಲಿ ಕಳ್ಳತನ: ಪ್ರಕರಣ ದಾಖಲು
ಹುಬ್ಬಳ್ಳಿ: ಪೆಪ್ಸಿ ಕಂಪನಿಯ ಗೋದಾಮಿನ ಹಿಂಬದಿಯ ಕಿಟಕಿಯನ್ನು ತೆರೆದು ಒಳನುಗ್ಗಿದ ಕಳ್ಳರು ಸುಮಾರು ರು. 45 ಸಾವಿರ ಮೌಲ್ಯದ ಯಂತ್ರೋಪಕರಣಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಹಳೆಹುಬ್ಬಳ್ಳಿ ವಿಕಾಸನಗರದಲ್ಲಿ ಸಂಭವಿಸಿದೆ. ನೆಕ್ಟರ್ ಬೆವರೇಜಿಸ್ ಪ್ರೈವೇಟ್ ಲಿಮಿಟೆಡ್‌ನಲ್ಲೇ ಈ ಕಳ್ಳತನ ನಡೆದಿದ್ದು, ರು. 25 ಸಾವಿರ ಮೌಲ್ಯದ ಯುಪಿಎಸ್ ಬ್ಯಾಟರಿ, ರು. 20 ಸಾವಿರ ಮೌಲ್ಯದ ಕ್ರೇವ್ಸ್ ಮತ್ತು ಬಾಕ್ಸ್‌ಗಳನ್ನು ಕಳ್ಳರು ದೋಚಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಜೀವ ಬೆದರಿಕೆ: ಅನಗತ್ಯವಾಗಿ ತೊಂದರೆ ಕೊಡುತ್ತಿರುವುದನ್ನು ಪ್ರಶ್ನಿಸಿದ ವ್ಯಕ್ತಿಗೆ ಇಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆವೊಡ್ಡಿದ ಘಟನೆ ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೆಟ್ಲಮೆಂಟ್‌ನ ಭೀಮಪ್ಪ ಇಂದರಗಿ ಎಂಬುವರಿಗೆ ಅದೇ ಪ್ರದೇಶದ ಈಶ್ವರಪ್ಪ ಹಾಗೂ ಬಸವರಾಜ ಎಂಬುವರು ಜೀವ ಬೆದರಿಕೆವೊಡ್ಡಿದ್ದಾರೆ. ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಆಭರಣ ಕಳುವು: ಶಾಪಿಂಗಿಗೆ ತೆರಳಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ರು. 48,200 ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಝರೀನಾಬೇಗಂ ಎಂಬುವರೇ ಚಿನ್ನಾಭರಣ ಕಳೆದುಕೊಂಡವರಾಗಿದ್ದಾರೆ. ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

