ಧಾರವಾಡ

ಗ್ರಾಪಂ ಅವ್ಯವಹಾರ ತನಿಖೆಗೆ ಆಗ್ರಹ

Published On :

ಕಲಘಟಗಿ: ತಾಲೂಕಿನ ತಂಬೂರ ಗ್ರಾಪಂ ಸದಸ್ಯರ ನಡೆಸಿರುವ ಅವ್ಯವಹಾಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮಕೈಗೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷೆ ನಿರ್ಮಲಾ ರಾಜು ಉಡುಪಿ ಆಗ್ರಹಿಸಿದ್ದಾರೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿರುವ ಅವರು, ಪಂಚಾಯತ್ ರಾಜ್ ನಿಯಮಾವಳಿಗಳನ್ನು ಗಾಳಿ ತೂರಿ ಆಶ್ರಯ ಮನೆ, ಶೌಚಾಲಯ ಹಾಗೂ ಇನ್ನಿತರ ಜನಪರ ಅಭಿವೃದ್ಧಿ ಯೋಜನೆಯಲ್ಲಿ ಲಕ್ಷಾಂತರ ರು. ಅವ್ಯವಹಾರ ನಡೆಸಲಾಗಿದೆ ಎಂದು ದೂರಿದ್ದಾರೆ.
ಗ್ರಾಪಂ ಸದಸ್ಯರಾದ ರಾಜು ಭಜಂತ್ರಿ, ಶೋಭಾ ಎಸ್. ಹರಿಜನ, ವಿದ್ಯಾವತಿ ಕಂಚನಳ್ಳಿ, ರಾಮು ಅಲ್ಲಾಪುರ ಸರ್ಕಾರಿ ಹಣ ದುರ್ಬಳಕೆ ಮಾಡಲು ಯತ್ನಿಸಿದಾಗ ತಾವು ಅದಕ್ಕೆ ಅಡ್ಡಿಪಡಿಸಿದ್ದೆವು. ಇದೇ ಕಾರಣಕ್ಕಾಗಿಯೇ ತಮ್ಮ ವಿರುದ್ಧ ಅವಿಶ್ವಾಸ ಮಂಡಿಸಲು ಈ ಸದಸ್ಯರು ಮುಂದಾಗಿದ್ದರು ಎಂದೂ ಉಡುಪಿ ಪತ್ರದಲ್ಲಿ ವಿವರಿಸಿದ್ದಾರೆ.ಗ್ರಾಪಂನಲ್ಲಿ ನಡೆದಿರುವ ಈ ಅವ್ಯವಹಾರದ ತನಿಖೆ ಪೂರ್ಣಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವವರೆಗೂ ಅಧ್ಯಕ್ಷರ ಚುನಾವಣೆ ಮುಂದೂಡಬೇಕೆಂದೂ ಅವರು ಒತ್ತಾಯಿಸಿದ್ದಾರೆ.
ತಮ್ಮ ಸೇವಾ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಏನಾದರೂ ಅವ್ಯವಹಾರ ನಡೆದಿದೆಯೇ ಎಂಬುದನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿ, ಜಿಪಂ ಹಾಗೂ ತಾಪಂ ಅಧಿಕಾರಿಗಳಿಗೆ ಪತ್ರ ಬರೆದಿರುವುದಾಗಿಯೂ ತಿಳಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.