ಧಾರವಾಡ

ಪ್ರತಿಯೊಬ್ಬರೂ ಸಂಚಾರಿ ನಿಯಮ ಪಾಲಿಸಿ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜ. 21
ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಇಲಾಖೆ ಆಯೋಜಿಸಿರುವ 25ನೇ ಸಂಚಾರ ರಸ್ತೆ ಸುರಕ್ಷಾ ಸಪ್ತಾಹಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಬೆಳಗ್ಗೆ ಕಿತ್ತೂರು ಚನ್ನಮ್ಮ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ರಮಣದೀಪ ಚೌಧರಿ, ಪೊಲೀಸ್ ಆಯುಕ್ತ ರವೀಂದ್ರಪ್ರಸಾದ, ಡಿಸಿಪಿಗಳಾದ ಸುಭಾಷ ಗುಡಿಮನಿ, ಶ್ರೀನಾಥ ಜೋಶಿ ಮತ್ತಿತರರು ಸುರಕ್ಷಿತ ಸಂಚಾರಕ್ಕೆ ಸಂಬಂಧಿಸಿದಂತೆ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಪೊಲೀಸ್ ಆಯುಕ್ತ ರವೀಂದ್ರಪ್ರಸಾದ, ಪ್ರತಿಯೊಬ್ಬರೂ ಕಡ್ಡಾಯವಾಗಿ ಸಂಚಾರ ವ್ಯವಸ್ಥೆಯನ್ನು ಪಾಲಿಸಬೇಕು. ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯ. ಸಂಚಾರ ನಿಯಮಗಳು ಇರುವುದೇ ಸಾರ್ವಜನಿಕರ ಸುರಕ್ಷತೆಗಾಗಿ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸುರಕ್ಷಿತ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ ವಾಹನ ಸವಾರರು ಕೈಗೊಳ್ಳಬೇಕಾದ ಕ್ರಮಗಳ ಕುರಿತಾದ ಬ್ಯಾನರ್‌ಗಳನ್ನು ಹಿಡಿದ ನಗರದ ಪ್ರಮುಖ ಬೀದಿಗಳಲ್ಲಿ ಪ್ರಭಾತಪೇರಿ ನಡೆಸಿದ್ದು ಗಮನ ಸೆಳೆಯಿತು. ಎಸಿಪಿ ಎ.ಆರ್. ಬಡಿಗೇರ, ವಸಂತ ಲದವಾ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
 ಹೇಳುವುದು ಆಚಾರ...
ಹುಬ್ಬಳ್ಳಿ: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುವ ಆರಕ್ಷಕರು ನಿಯಮಗಳನ್ನು ಉಲ್ಲಂಘಿಸಬಹುದೆ..?
ಮಹಾನಗರ ಪೊಲೀಸ್ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ 25ನೇ ಸಂಚಾರ ರಸ್ತೆ ಸುರಕ್ಷಾ ಸಪ್ತಾಹ ಇದಕ್ಕೆ ಸಾಕ್ಷಿಯಾಯಿತು. ಆರಕ್ಷಕರಿಂದ ನಡೆದ ಪ್ರಮಾದ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು.
ಸಪ್ತಾಹ ಸಂದರ್ಭದಲ್ಲೇ ಇಲಾಖೆ ಅಧಿಕಾರಿಗಳಿಂದ ಸಂಚಾರ ನಿಯಮ ಉಲ್ಲಂಘನೆಯಾಗಿದ್ದು ನಿಜಕ್ಕೂ ವಿಪರ್ಯಾಸದ ಸಂಗತಿ. ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಮನೋಹರ ಜೋಗಳೆಕರ ಅವರಿಗೆ ಸೇರಿದ ಇನೋವಾ (ಕೆಎ25, ಜಿ 510)ವನ್ನು ಚಾಲಕ, ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವ ಮೂಲಕ ಉದ್ದಟತ ಪ್ರದರ್ಶಿಸಿದ್ದ. ಇದು ಸಾಕಷ್ಟು ಟ್ರಾಫಿಕ್ ಜಾಮ್ ಸಮಸ್ಯೆಗೂ ಕಾರಣವಾಯಿತು. ಅಧಿಕಾರಿಯ ವಾಹನ ನೋ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದರೆ ಅಪರಾಧವಲ್ಲವೇ ಎಂದು ಗೊಣಗಿದ ಸಾರ್ವಜನಿಕರೊಂದಿಗೆ ಚಾಲಕ ಖಾಕಿ ಖದರು ತೋರಿಸಿದ! ಹೇಳುವುದು ಆಚಾರ ತಿನ್ನುವುದು... ಎಂದು ಆರಕ್ಷಕರನ್ನು ಶಪಿಸುತ್ತ ಜನರು ಸಾಗಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.