ಕೃಷ್ಣಬಲರಾಮರ ರಥ ಯಾತ್ರೆ
ಹುಬ್ಬಳ್ಳಿ: ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ತನ್ನ 12ನೇ ರಥ ಯಾತ್ರೆಯನ್ನು ಜ. 25ರಂದು ಹುಬ್ಬಳ್ಳಿಯಲ್ಲಿ ಹಾಗೂ ಫೆ. 1ರಂದು ಧಾರವಾಡದಲ್ಲಿ ಹಮ್ಮಿಕೊಂಡಿದೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಹುಬ್ಬಳ್ಳಿ-ಧಾರವಾಡ ಇಸ್ಕಾನ್ ಅಧ್ಯಕ್ಷ ರಾಜೀವ ಲೋಚನ ದಾಸ, ಹುಬ್ಬಳ್ಳಿಯಲ್ಲಿ ಸಂಜೆ 4 ರಿಂದ ರಾತ್ರಿ 8 ಗಂಟೆವರೆಗೆ ರಥ ಯಾತ್ರೆ ನಡೆಯಲಿದೆ ಎಂದು ಹೇಳಿದರು. ದುರ್ಗದಬೈಲಿನಿಂದ ಆರಂಭವಾಗುವ ಈ ರಥ ಯಾತ್ರೆಗೆ ಬೆಂಗಳೂರಿನ ಇಸ್ಕಾನ್ ಅಧ್ಯಕ್ಷ, ಅಕ್ಷಯ ಪಾತ್ರ ಪ್ರತಿಷ್ಠಾನದ ಚೇರ್‌ಮನ್‌ರೂ ಆದ ಮಧುಪಂಡಿತ ದಾಸ್ ಮತ್ತು ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡುವರು. ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಥಯಾತ್ರೆ ರಾತ್ರಿ 8ಕ್ಕೆ ದೇಶಪಾಂಡೆ ನಗರದ ಗುಜರಾತ್ ಭವನ್ನ ತಲುಪುವುದು. ಧಾರವಾಡದ ಟೌನ್ ಹಾಲ್‌ನಲ್ಲಿ ರಥಯಾತ್ರೆಗೆ ಶಾಸಕ ಶ್ರೀನಿವಾಸ ಮಾನೆ ಹಾಗೂ ಜಿಲ್ಲಾಧಿಕಾರಿ ಸಮೀರ ಶುಕ್ಲಾ ಚಾಲನೆ ನೀಡಲಿದ್ದು, ನವಲಗುಂದ ಶ್ರೀ ಜಗದ್ಗುರು ಅಜತಲಿಂಗ ಮಹಾಸ್ವಾಮಿ ಮಠದ ಶ್ರೀ ವೀರಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಆಕರ್ಷಕವಾಗಿ ಅಲಂಕರಿಸಲ್ಪಟ್ಟ ಶ್ರೀ ಕೃಷ್ಣ ಬಲರಾಮರ ಮೂರ್ತಿ ಹೊತ್ತ, 40 ಅಡಿ ಎತ್ತರದ ನಯನ ಮನೋಹರವಾದ ವರ್ಣಮಯ ರಥವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವುದು. ರಸ್ತೆಯಲ್ಲಿ ಸಂಚರಿಸುವಾಗ ವಿದ್ಯುತ್ ತಂತಿಗಳು ಅಡ್ಡ ಬಂದರೆ ಗೋಪುರದ ಎತ್ತರ ಕಡಿಮೆ ಮಾಡುವ ಹಾಗೂ ಮತ್ತೆ ಹೆಚ್ಚಿಸುವ ಯಾಂತ್ರಿಕ ವ್ಯವಸ್ಥೆ ಈ ರಥದಲ್ಲಿದೆ. ಈ ಉತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

