ಗೂಡ್ಸ್ ವಾಹನದಲ್ಲಿ ಮಕ್ಕಳ ಶೈಕ್ಷಣಿಕ ಪ್ರವಾಸ
ಧಾರವಾಡ: ಗೂಡ್ಸ್ ವಾಹನದಲ್ಲಿ ಶಾಲಾ ಮಕ್ಕಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಿದ ಕ್ರಮ ಖಂಡಿಸಿ ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಲಾಯಿತು. ಡಿಸೆಂಬರ್ ಅಂತ್ಯದೊಳಗೆ ಶಾಲೆಯ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯಬೇಕೆಂಬ ನಿರ್ದೇಶನವಿದೆ. ಅಲ್ಲದೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪರವಾನಗಿ ಸಹ ಪಡೆಯದೇ ತಾಲೂಕಿನ ತಡಕೋಡ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿ ಹೊಂಗಲ ನೇತೃತ್ವದಲ್ಲಿ ಕಳೆದ ಜ. 18 ರಿಂದ 20ರ ವರೆಗೆ ಮೂರು ದಿನ 32 ಮಕ್ಕಳು ಪ್ರವಾಸಕ್ಕೆ ಹೋಗಿದ್ದರು. ಶಿಕ್ಷಕರು ಈ ಎಲ್ಲ ಗಂಡು-ಹೆಣ್ಣು ಮಕ್ಕಳನ್ನು ಒಂದೇ ಗೂಡ್ಸ್ ವಾಹನದಲ್ಲಿ ಕರೆದುಕೊಂಡು ಹೋಗಿದ್ದರಿಂದ ಮಕ್ಕಳು ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಕರಿಕಟ್ಟಿ ಅವರು ಮುಖ್ಯ ಶಿಕ್ಷಕಿ ಲಕ್ಷ್ಮಿ ಹೊಂಗಲ ಅವರನ್ನು ಅಮಾನತು ಮಾಡಿದ್ದರು. ಆದರೆ, ಆದೇಶ ಪ್ರಶ್ನಿಸಿದ ಕೆಲ ಸಂಘಟನೆಗಳ ಮುಖಂಡರು ಗುರುವಾರ ಸಂಜೆ ಏಕಾಏಕಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದರು. ಕೇವಲ ಮುಖ್ಯ ಶಿಕ್ಷಕರನ್ನು ಮಾತ್ರ ಅಮಾನತುಗಳಿಸಿದ್ದು ಏಕೆ, ಪ್ರವಾಸಕ್ಕೆ ಹೋದ ಇನ್ನಿಬ್ಬರು ಸಹ ಶಿಕ್ಷಕರನ್ನು ಸಹ ಅಮಾನತುಗೊಳಿಸಬೇಕು ಎಂದು ಪಟ್ಟು ಹಿಡಿದಿದ್ದರು.
ಡಿಡಿಪಿಐ ಹಿಂದೇಟು: ಗುರುವಾರ ಸಂಜೆ ಪ್ರತಿಭಟನೆ ಆರಂಭವಾಗಿದ್ದರೂ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗದ ಉಪನಿರ್ದೇಶಕ ಬಿ.ಕೆ.ಎಸ್. ವರ್ಧನ್ ಅವರು ರಾತ್ರಿ ಸುಮಾರು ಒಂಭತ್ತು ಗಂಟೆ ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಪರಿಹರಿಸುವ ಯತ್ನ ಮಾಡಿದರಾದರೂ ತಡರಾತ್ರಿವರೆಗೆ ಯಾವುದೇ ಫಲ ನೀಡಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

