ಪ್ರಜಾಪ್ರಭುತ್ವ ಉಳಿವಿಗೆ ಮಾಧ್ಯಮಗಳಲ್ಲಿ ಪ್ರಾಮಾಣಿಕತೆ ಅಗತ್ಯ: ಪಾಪು
ಧಾರವಾಡ: ಪ್ರಜಾಪ್ರಭುತ್ವ ಬಲಗೊಳ್ಳಬೇಕಾದರೆ ಮಾಧ್ಯಮ ಮತ್ತು ನ್ಯಾಯಾಂಗ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಹಿರಿಯ ಪತ್ರಕರ್ತ, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಹೇಳಿದರು. ಕರ್ನಾಟಕ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಹಾಗೂ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ಶನಿವಾರ ನಡೆದ 'ನವ ಮಾಧ್ಯಮ ಮತ್ತು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ' ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ನನ್ನ ಪತ್ರಿಕೋದ್ಯಮದ ವೃತ್ತಿ ಜೀವನದಲ್ಲಿ ಎಂದಿಗೂ ಹಣದ ಬೆನ್ನು ಹತ್ತಲಿಲ್ಲ. ಜೇಬಿನಲ್ಲಿ ಹಣವಿರದಿದ್ದರೂ ಲೇಖನಿ ಇರುತ್ತಿತ್ತು. ಆದರೆ, ಪ್ರಸ್ತುತ ಹಣ ಮಾಡಿಕೊಳ್ಳಲೆಂದೇ ಮಾಧ್ಯಮ ಕ್ಷೇತ್ರಕ್ಕೆ ಕೆಲವರು ಆಗಮಿಸುತ್ತಿದ್ದಾರೆ. ಹಣ ಗಳಿಸುವ ಆಶಯ ಇರುವವರು ದಯವಿಟ್ಟು ಬೇರೆ ವೃತ್ತಿ ಆಯ್ದುಕೊಳ್ಳಿ ಎಂದರು. ಪ್ರಜೆಗಳನ್ನು ರಕ್ಷಿಸಬೇಕಾದ ಮಾಧ್ಯಮ ಹಾಗೂ ನ್ಯಾಯಾಂಗಗಳು ತಮ್ಮ ಕರ್ತವ್ಯದಲ್ಲಿ ವಿಫಲವಾದರೆ ಜನರನ್ನು ದೇವರೂ ರಕ್ಷಿಸಲಾರ. ಆದ್ದರಿಂದ ಪ್ರಜಾಭುತ್ವ ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಮಾಧ್ಯಮ ಹಾಗೂ ನ್ಯಾಯಾಂಗ ಪ್ರಾಮಾಣಿಕತೆಯಿಂದ ಕೆಲಸ ಮಾಡಲಿ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಆಳ ಅಧ್ಯಯನದೊಂದಿಗೆ ವೃತ್ತಿ ಜೀವನಕ್ಕೆ ಕಾಲಿರಿಸಿದರೆ ಮಾತ್ರ ಯಶಸ್ವಿ ಪತ್ರಕರ್ತರಾಗುತ್ತೀರಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

