ಧಾರವಾಡ

ಬಂಧನ ಖಂಡಿಸಿ ಕಸಗುಡಿಸಿದ ಅತಿಥಿ ಉಪನ್ಯಾಸಕರು

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಜ. 28
ಸೇವಾ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಹಾಗೂ ಬೆಂಗಳೂರಿನಲ್ಲಿ ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಬಂಧನ ಖಂಡಿಸಿ ಕಳೆದ ಏಳು ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸುತ್ತಿರುವ  ಅತಿಥಿ ಉಪನ್ಯಾಸಕರು ಮಂಗಳವಾರ ರಸ್ತೆ ಕಸಗುಡಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉನ್ಯಾಸಕರು ಸರದಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಉನ್ನತ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಮಹಿಳಾ ಉಪನ್ಯಾಸಕರು ಕಸಗುಡಿಸಿದರೆ, ಪುರುಷ ಉಪನ್ಯಾಸಕರು ರಸ್ತೆಯಲ್ಲಿ ಹೋಗಿ ಬರುವ ವಾಹನಗಳನ್ನು ಸ್ವಚ್ಛಗೊಳಿಸಿ ಸರ್ಕಾರದ ಗಮನ ಸೆಳೆದರು. ಜ. 29ರಂದು ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಅತಿಥಿ ಉಪನ್ಯಾಸಕರ ಸಂಘದ ಒಕ್ಕೂಟ ಹೇಳಿದೆ.
ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ಜಿಪಂ ಸದಸ್ಯ ವೈ.ಬಿ. ದಾಸನಕೊಪ್ಪ, ಎಸ್‌ಎಫ್‌ಐ ರಾಜ್ಯ ಸಂಚಾಲಕ ಸಮಿತಿ ಸದಸ್ಯ ಸಂದೀಪ, ವಿಶಾಲ ಜೈನ್, ಮಂಜುನಾಥ ಮಕರವಳ್ಳಿ, ಈರಪ್ಪ ನಾಯಕ, ಗೂಂಡೂರಾವ್ ನಾಯಕ, ಕಮ್ಯುನಿಸ್ಟ್ ಪಕ್ಷದ ಮುಖಂಡ ಬಿ.ಎಸ್. ಸೊಪ್ಪಿನ, ಬಿಎಸ್‌ಪಿ ಮುಖಂಡ ಲಕ್ಷ್ಮಣ ಬಕಾಯಿ ಬೆಂಬಲಿಸಿದ್ದಾರೆ. ಮಂಗಳವಾರ ಸರದಿ ಉಪವಾಸದಲ್ಲಿ ವೆಂಕಟೇಶ ಗಂಜಿಗಟ್ಟೆ, ಸಿ.ಸಿ. ಚಿಣಗಿ, ಉಮೇಶ ಬಾಂಡಗೆ, ಮಾರುತಿ ನಂದನ, ಕೆ.ಎನ್. ಭಜಂತ್ರಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.