ಧಾರವಾಡ

ಆಶ್ರಯ ಮನೆ ವಿತರಿಸಿ

Published On :

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ನೀಡುವುದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರಿಗೆ ಕನ್ನಡ ಕ್ರಾಂತಿ ದೀಪ ಸಂಘಟನೆ ಧಾರವಾಡ ಜಿಲ್ಲಾಧ್ಯಕ್ಷೆ ಭರಮವ್ವ ಮ್ಯಾಗಳಮನಿ ಮನವಿ ಸಲ್ಲಿಸಿದರು. ಶ್ರೀಮಂತರ ಮನೆಗಳಲ್ಲಿ ಮನೆಗೆಲಸ ಮಾಡಿಕೊಂಡು ಜೀವನ ಮಾಡುತ್ತಿರುವ ನಮಗೆ ಬಾಡಿಗೆ ನೀಡಿ ಜೀವನ ನಡೆಸುವುದು ಕಷ್ಟವಾಗಿದ್ದು, ಆದ್ದರಿಂದ ಸರ್ಕಾರ ತಕ್ಷಣ ಆಶ್ರಯ ಯೋಜನೆಯಡಿ ಬಡ ಮಹಿಳೆಯರಿಗೆ ಮನೆಗಳನ್ನು ವಿತರಿಸಬೇಕು. ಒಂದು ವೇಳೆ ಸರ್ಕಾರ ಆಶ್ರಯ ಯೋಜನೆಯಡಿ ಮನೆಗಳನ್ನು  ನೀಡದಿದ್ದಲ್ಲಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳುವುದಕ್ಕೆ ತೀರ್ಮಾನಿಸಿದ್ದು, ಇದಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಕನ್ನಡ ಕ್ರಾಂತಿ ದೀಪ ಸಂಘಟನೆಯ ರಾಜ್ಯ ಉಪಾಧ್ಯಕ್ಷ ದೇವೇಂದ್ರಪ್ಪ ಇಟಗಿ, ಶಿವಕುಮಾರ ಕದಂ, ಸಂಜೀವ ದುಮ್ಮಕನಾಳ, ವಿಶ್ವನಾಥ ಚಂದಾವರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.