ಶಿಕ್ಷಣ ಪ್ರತಿ ಮಗುವಿನ ಹಕ್ಕು
ಲಕ್ಷ್ಮೇಶ್ವರ: 6-14 ವರ್ಷದೊಳಗಿನ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದು, ಪಾಲಕರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ ಹೇಳಿದರು.
ಅವರು ಪಟ್ಟಣದ ಪುರಸಭೆ ಎದುರು ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆ ತರುವ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ಮಗುವಿನ ಹಕ್ಕು. ಅದನ್ನು ಮೊಟಕುಗೊಳಿಸುವ ಕಾರ್ಯವನ್ನು ಪಾಲಕರು ಮಾಡದೇ ತಮ್ಮ ಮಗುವಿನ ಉನ್ನತ ಭವಿಷ್ಯದ ಬಗ್ಗೆ ಚಿಂತನೆ ಮಾಡಬೇಕು. ಚಿಕ್ಕ ಮಕ್ಕಳನ್ನು ದುಡಿಯಲು ಕಳುಹಿಸುವುದು ಅಪರಾಧ. ಶಿಕ್ಷಣವಿಲ್ಲದೇ ಇಂದು ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಶಿಕ್ಷಣ ಕೇವಲ ಸಂಬಳ ತರುವ ನೌಕರಿ ಪಡೆಯುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ನಮ್ಮ ಬದುಕು ಹಸನಾಗಲು ಶಿಕ್ಷಣ ಅವಶ್ಯ ಎಂದರು.
ಬಿಇಒ ಆರ್.ಎಸ್. ಬುರುಡಿ ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕಿನ ಹಲವು ಕಡೆಗಳಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವ ಕಾರ್ಯದಲ್ಲಿ ಶಿಕ್ಷಕರು ತೊಡಗಿಸಿಕೊಂಡು ಯಶಸ್ಸು ಗಳಿಸಬೇಕು. ಪ್ರತಿ ಮಗುವೂ ತನ್ನ ಜೀವನ ರೂಪಿಸಿಕೊಳ್ಳುವಲ್ಲಿ ಶಿಕ್ಷಣ ಮಹತ್ತರ ಪಾತ್ರವಹಿಸುತ್ತದೆ. ಅದಕ್ಕಾಗಿ ತಾಲೂಕಿನಲ್ಲಿ ಇರುವ ಶಾಲೆ ಬಿಟ್ಟ ಮಕ್ಕಳ ಪಾಲಕರ ಮನೆ ಮನೆಗೆ ಹೋಗಿ ಅವರ ಮನವೊಲಿಸುವ ಕಾರ್ಯವನ್ನು ಮಾಡಿಕೊಡುವ ಮೂಲಕ ಪುನಃ ಶಾಲೆಗೆ ಕರೆ ತರುವ ಕಾರ್ಯವನ್ನು ನಾವು ಮಾಡುತ್ತೇವೆ ಎಂದರು.
ಪುರಸಭೆ ಉಪಾಧ್ಯಕ್ಷ ಎಂ.ಆರ್. ಪಾಟೀಲ್, ಬಿಆರ್ಪಿ ಜೆ.ಬಿ. ಗುಡಿ ಹಾಗೂ ತಾಲೂಕಿನ ಎಲ್ಲ ಕ್ಲಸ್ಟರ್ ಮಟ್ಟದ ಶಿಕ್ಷಣ ಸಂಯೋಜಕರು, ಪುರಸಭೆ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

