ಧಾರವಾಡ

ಮಠಗಳಿಗೆ ಕೈ ಹಚ್ಚಿದ್ರೆ ಭಸ್ಮ

Published On :

ಹುಬ್ಬಳ್ಳಿ: ಮಠ-ಮಂದಿರಗಳನ್ನು ಮುಜರಾಯಿ ಇಲಾಖೆಗೆ ಸೇರಿಸುವ ಬಗ್ಗೆ ಮಾತನಾಡುವ ರಾಜ್ಯ ಸರ್ಕಾರ ಮಸೀದಿ, ಚರ್ಚ್‌ಗಳ ಬಗ್ಗೆ ಏಕೆ ಪ್ರಸ್ತಾಪಿಸುತ್ತಿಲ್ಲ ಎಂದು ಪ್ರಶ್ನಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ, ಒಂದಾನು ವೇಳೆ ಸರ್ಕಾರ ಮಠಗಳಿಗೆ ಕೈ ಹಚ್ಚಿದರೆ ಭಸ್ಮವಾದೀತು ಎಂದು ಎಚ್ಚರಿಕೆ ನೀಡಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಹಿಂದೂಗಳ ಭಾವನೆ ಕೆಣಕುವ ಕೆಲಸ ಮಾಡುತ್ತಿದೆ. ಹಿಂದೂ ಮಠಗಳ ಬಗ್ಗೆ ಮಾತನಾಡುವ ಸರ್ಕಾರ ಸರ್ಕಾರ ಮಸೀದಿ, ಚರ್ಚ್‌ಗಳನ್ನು ಮುಜರಾಯಿ ಇಲಾಖೆಗೆ ಸೇರಿಸಲಿ ನೋಡೋಣ ಎಂದು ಸವಾಲು ಹಾಕಿದ ಮುತಾಲಿಕ, ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ಮುಖ್ಯಮಂತ್ರಿಯಾದ ಮರುಕ್ಷಣದಲ್ಲೇ ಸಿದ್ದರಾಮಯ್ಯ ಉಡುಪಿ ಮಠವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಬಗ್ಗೆ ಮಾತನಾಡಿದ್ದರು. ಈ ಎಲ್ಲ ನಾಟಕ ಅಲ್ಪಸಂಖ್ಯಾತರ ಮತಕ್ಕಾಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿದ್ಧಗಂಗಾದಂತಹ ಮಠಗಳು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮೂಲಕ ದಾರಿದೀಪವಾಗಿವೆ. ಸರ್ಕಾರ ಇಂಥ ವ್ಯವಸ್ಥೆಯನ್ನು ಹದಗೆಡಿಸುವ ಕೆಲಸಕ್ಕೆ ಮುಂದಾದರೆ ತಕ್ಕಶಾಸ್ತಿ ಮಾಡುತ್ತೇವೆ ಎಂದು ಎಚ್ಚರಿಸಿದರು.

ಅಲ್ಪಸಂಖ್ಯಾತರ ಓಲೈಕೆ ಸರಿಯಲ್ಲ
ಪ್ರಖರ ಹಿಂದೂತ್ವವಾದಿ ಎಂದೆನಿಸಿಕೊಂಡಿರುವ ನರೇಂದ್ರ ಮೋದಿ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿರುವ ಪ್ರವೃತ್ತಿ ಸರಿಯಲ್ಲ. ಚಿತ್ರ ನಟ ಸಲ್ಮಾನ್‌ಖಾನ್ ಕಡೆಯಿಂದ ಹೊಗಳಿಸಿಕೊಂಡಿದ್ದಲ್ಲದೆ, ಗುಜರಾತ್‌ನ ಹಜ್ ಕಮಿಟಿ ಚೇರ್‌ಮನ್ ಎಂ.ಕೆ. ಚಿಸ್ತಿ ಮುಖಾಂತರ ಪ್ರಚಾರ ಮಾಡಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಮುತಾಲಿಕ ಹೇಳಿದರು.
ಸ್ಪರ್ಧೆ ನಿಶ್ಚಿತ
ತಾವು ನರೇಂದ್ರ ಮೋದಿಯವರನ್ನು ಬೆಂಬಲಿಸಿದ ಮಾತ್ರಕ್ಕೆ ಬಿಜೆಪಿಯನ್ನು ಬೆಂಬಲಿಸಿದಂತೆ ಅಲ್ಲ. ಯಾವುದೇ ಕಾರಣಕ್ಕೂ ತಾವು ಬಿಜೆಪಿ ಸೇರುವುದಿಲ್ಲ. ಬರುವ ಲೋಕಸಭೆ ಚುನಾವಣೆಗೆ ತಾವು ಸ್ಪರ್ಧಿಸುವುದು ನಿಶ್ಚಿತ. ಕ್ಷೇತ್ರ ಯಾವುದೆಂಬ ನಿರ್ಧಾರ ಇಷ್ಟರಲ್ಲಿಯೇ ಪ್ರಕಟಿಸುವುದಾಗಿ ಪ್ರಮೋದ ಮುತಾಲಿಕ ತಿಳಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.