ಫೆ. 2ರಂದು ಹುಬ್ಬಳ್ಳಿಯಲ್ಲಿ 'ಮಹಾಸಂಗ್ರಾಮ'
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜ. 30
ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಫೆ. 2ರಂದು 'ಮಹಾಸಂಗ್ರಾಮ' ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ವಿವಿಧ ಮೂಲೆಗಳಿಂದ 1 ಲಕ್ಷಕ್ಕೂ ಅಧಿಕ ಹಿಂದೂಗಳು ಪಾಲ್ಗೊಳ್ಳಲಿದ್ದಾರೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ತಿಳಿಸಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಯಿಂದ ಮಧ್ನಾಹ್ನ 12 ಗಂಟೆಯವರೆಗೆ ಸರ್ವ ಸಂಕಟ ಹಾಗೂ ಸರ್ವರೋಗ ನಿವಾರಣೆಗಾಗಿ 150 ಅರ್ಚಕರಿಂದ ಸಾಮೂಹಿಕ ಹೋಮ ನಡೆಯಲಿದೆ. ತದ ನಂತರ ಮಧ್ಯಾಹ್ನ 3 ಗಂಟೆಗೆ ಸಮಾವೇಶ ನಡೆಯಲಿದೆ.
ಸಮಾವೇಶದ ಅಧ್ಯಕ್ಷತೆಯನ್ನು ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ಬೆಂಗಳೂರಿನ ಡಾ. ವಿಶ್ವ ಸಂತೋಷ ಭಾರತಿ ಸ್ವಾಮೀಜಿ, ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ, ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಬಂಜಾರಾ ಸಮಾಜದ ಸೇವಾಲಾಲ ಸ್ವಾಮೀಜಿ, ಹುಬ್ಬಳ್ಳಿ ಶಾರದಾಶ್ರಮದ ಮಾತಾಜಿ ತೇಜೋಮಯಿ, ಬಸವಗೀತಾ ಮಾತಾಜಿ, ಹೊಸಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ 150 ಸ್ವಾಮೀಜಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖರಾದ ತಪನ ಘೋಷ, ಅರ್ಜುನ್ ಸಂಪತ್, ಹಿಮಾನಿ ಸಾವರಕರ, ಮಿಲಿಂದ ಏಕಬೋಟೆ, ರಮೇಶ ಶಿಂಧೆ, ರಾಜಾ ಠಾಕೂರ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆಂದರು.
ಈಶ್ವರಗೌಡ ಪಾಟೀಲ, ಗಂಗಾಧರ ಕುಲಕರ್ಣಿ, ಕುಮಾರ ಹಕಾರಿ, ಮನೋಜ ಹಾನಗಲ್, ಕಮಲಕ್ಕಾ ಜಾಡರ್, ಜಿ. ಮಂಗಳಮೂರ್ತಿ, ವೆಂಕಟೇಶ ಸವದತ್ತಿ ಗೋಷ್ಠಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

