ಬಾಲ್ಯ ವಿವಾಹ ನಿಷೇಧ ಕಾರ್ಯಾಗಾರ
ಹುಬ್ಬಳ್ಳಿ: ಜಿಲ್ಲೆಯ ಕಲ್ಯಾಣ ಮಂಟಪ ವ್ಯವಸ್ಥಾಪಕರಿಗೆ ಹಾಗೂ ಪುರೋಹಿತರಿಗೆ 'ಬಾಲ್ಯ ವಿವಾಹ ನಿಷೇಧ' ಕುರಿತ ಮಾಹಿತಿ ಕಾರ್ಯಾಗಾರವನ್ನು ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಧಾರವಾಡದ ಕಿಡ್ಸ್ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹುಬ್ಬಳ್ಳಿ ತಾಲೂಕು ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ತ್ರಿಶೂಲಾ ಅಪ್ಪಣ್ಣವರ, ತಾವು ಬಾಲ್ಯ ವಿವಾಹ ನಿಷೇಧಕ್ಕೆ ಬದ್ಧರೆಂದು ಸಹಿ ಮಾಡುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ತ್ರಿಶೂಲಾ ಅಪ್ಪಣ್ಣವರ, ಪ್ರತಿ ಸಮಿತಿಯವರು ವಧು-ವರರ ದಾಖಲಾತಿಗಳನ್ನು ತೆಗೆದುಕೊಳ್ಳುವದರ ಬಗ್ಗೆ ಹಾಗೂ ಪ್ರತಿ ಸಮಿತಿ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡುವುದರ ಬಗ್ಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಬಿ. ಗಂಗಲ್ ಮಾತನಾಡಿ, ಇತರ ಇಲಾಖೆಗಳಿಗೂ ಬಾಲ್ಯ ವಿವಾಹ ನಿಷೇಧದ ಮಾಹಿತಿ ನೀಡುವ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶೆಟ್ಟಪ್ಪನವರ, ಪೊಲೀಸ್ ನಿರೀಕ್ಷಕ ಅನಿಲಕುಮಾರ ಭೂಮರೆಡ್ಡಿ, ಕಿಡ್ಸ್ ಸಂಸ್ಥೆಯ ಅಶೋಕ ಯರಗಟ್ಟಿ, ಮಹಿಳಾ ಪೊಲೀಸ್ ಠಾಣೆಯ ಇನಸ್ಪೆಕ್ಟರ್ ನೀಲಮ್ಮ ಚಲವಾದಿ ಅತಿಥಿಗಳಾಗಿದ್ದರು. 85 ಜನ ಸಮಿತಿ, ಕಲ್ಯಾಣ ಪದಾಧಿಕಾರಿಗಳು ಹಾಗೂ ಪುರೋಹಿತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

