ಧಾರವಾಡ

ತಾಪಂ ಅಧ್ಯಕ್ಷೆಯಾಗಿ ಲಕ್ಷ್ಮವ್ವ ಆಯ್ಕೆ

Published On :

ಕಲಘಟಗಿ: ಇಲ್ಲಿನ ತಾಲೂಕು ಪಂಚಾಯ್ತಿ ಕೊನೆ ಅವಧಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ಸಿನ ಲಕ್ಷ್ಮವ್ವ ಲಮಾಣಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಯಲ್ಲಾರಿ ಶಿಂಧೆ ಆಯ್ಕೆಯಾದರು.
ಗುರುವಾರ ಮಧ್ಯಾಹ್ನ ತಾಪಂ ಸಭಾಭವನದಲ್ಲಿ ಉಪವಿಭಾಗಾಧಿಕಾರಿ ಮಾಹಾಂತೇಶ ಕರ್ಜಗಿ ಅವರು ಚುನಾವಣಾಧಿಕಾರಿಯಾಗಿ ನಡೆಸಿದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಐದು, ಬಿಜೆಪಿ ಎಂಟು ಸದಸ್ಯರುಗಳು ಭಾಗವಹಿಸಿದ್ದರು. ಒಟ್ಟು 13 ಜನ ಸದಸ್ಯರಲ್ಲಿ ಅಧ್ಯಕ್ಷ ಸ್ಥಾನವು ಅನುಸೂಚಿತ ವರ್ಗದ ಮಹಿಳೆ ಕಾಂಗ್ರೆಸ್ಸಿನ ಸದಸ್ಯರಾದ ಲಕ್ಷ್ಮವ್ವ ಲಮಾಣಿಗೆ ಮಾತ್ರ ಇರುವುದರಿಂದಾಗಿ ಅವಿರೋಧ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿನ ಪಾರವ್ವ ಲಕ್ಕಪ್ಪನವರ, ಬಿಜೆಪಿಯ ಯಲ್ಲಾರಿ ಶಿಂಧೆ ನಾಮಪತ್ರ ಸಲ್ಲಿಸಿದ್ದರು. ಹೆಚ್ಚಿನ ಸದಸ್ಯರು ಬಿಜೆಪಿಯವರು ಇರುವುದರಿಂದ ಉಪಾಧ್ಯಕ್ಷ ಸ್ಥಾನವು ಕಮಲಕ್ಕೆ ದೊರೆಯಿತು. ಕಳೆದ ಜು. 2ರಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕೋರಂ ಭರ್ತಿಯಾಗದ ಕಾರಣ ಚುನಾವಣೆ ಮುಂದೂಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.