ಚಿತ್ರಕಲಾ ಶಿಕ್ಷಣದಲ್ಲಿ ಆಧುನಿಕ ಸೌಲಭ್ಯಗಳ ಬಳಕೆ ಅಗತ್ಯ
ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯದೊಂದಿಗೆ ಬಿಜಾಪುರದ ಯುವ ಕಲಾವಿದ ವಿಜಯ ನಾಯಕ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಇಲ್ಲಿನ ಸರ್ಕಾರಿ ಆರ್ಟ್ಗ್ಯಾಲರಿಯಲ್ಲಿ ಭಾನುವಾರದಿಂದ ಆರಂಭವಾಯಿತು.
ಉದ್ಘಾಟನೆ ನೆರವೇರಿಸಿದ ಲಲಿತಕಲಾ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಡಾ.ಎಸ್.ಸಿ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ರಾಜ್ಯ ಸರ್ಕಾರ ಚಿತ್ರಕಲಾವಿದರ ಕಲಾ ಪ್ರದರ್ಶನಕ್ಕೆ ಧನ ಸಹಾಯ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಯುವ ಕಲಾವಿದರು ತಮ್ಮ ಕಲಾಕೃತಿ ಪ್ರದರ್ಶನಗಳನ್ನು ಏರ್ಪಡಿಸಿ ಈ ಕ್ಷೇತ್ರದಲ್ಲಿ ಬೆಳೆಯಲು ಇದು ತುಂಬಾ ಸಹಕಾರಿ. ಕಲಾ ಶಿಕ್ಷಣ ಸಂಸ್ಥೆಗಳ ಅಧ್ಯಾಪಕರು, ಕಲಾ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ-ಪಡಿಸಿಕೊಳ್ಳುವುದರೊಂದಿಗೆ ಅಲ್ಲಲ್ಲಿ ನಡೆಯುವ ಕಲಾ ಪ್ರದರ್ಶನಗಳಿಗೆ ವಿದ್ಯಾರ್ಥಿಗಳೊಂದಿಗೆ ಸಂದರ್ಶಿಸಿ ಪರಸ್ಪರ ವಿಚಾರ ವಿನಿಮಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು. ಹಿರಿಯ ಕಲಾವಿದ ಎಂ.ಆರ್. ಬಾಳಿಕಾಯಿ ಮಾತನಾಡಿ, ಯುವಕಲಾವಿದರು ನಿರಂತರ ಸಾಧನೆಗಳಿಂದ ಈ ಕ್ಷೇತ್ರದಲ್ಲಿ ಬೆಳಗಲು ಸಾಧ್ಯ. ಸ್ವತಂತ್ರ ಶೈಲಿಗಳನ್ನು ಮೈಗೂಡಿಸಿಕೊಂಡು ಸದಾಕಾಲ ಕಲಾಕೃತಿಗಳಲ್ಲಿ ಮಗ್ನರಾಗಿ ಕೃತಿ ರಚನೆ ಮಾಡುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದರು. ಸರ್ಕಾರಿ ಚಿತ್ರಕಲಾ ಕಾಲೇಜಿನ ಮುಖ್ಯಸ್ಥ ಸಿ.ಸಿ. ಬಾರಕೇರ, ಕಲಾವಿದರು ಚಿತ್ರಕಲೆಯ ಹಲವಾರು ಶೈಲಿಗಳನ್ನು ಅಧ್ಯಯನ ಮಾಡಿಕೊಂಡು ಯಾವುದೇ ಕಲಾಪ್ರಕಾರದಲ್ಲಿ ವಿಶೇಷ ಸಾಧನೆ ಮಾಡಿ ಖ್ಯಾತಿ ಪಡೆಯಲು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಕಲಾವಿದ ಸುರೇಶ ಹಾಲಬಾವಿ, ಕಲಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಅವುಗಳನ್ನು ಯುವ ಕಲಾವಿದರು ಬಳಸಿಕೊಳ್ಳುವಂತೆ ಸಲಹೆ ಮಾಡಿದರು. ಪ್ರತಾಪ ಬಹುರೂಪಿ ಸ್ವಾಗತಿಸಿದರು. ಬಸವರಾಜ ಕುರಿಯವರ ನಿರೂಪಿಸಿದರು. ವಿಜಯ ನಾಯಕ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

