ಧಾರವಾಡ

ಧಾರವಾಡ ತಾಪಂ ಅಧ್ಯಕ್ಷರಾಗಿ ಸುಮಿತ್ರಾ

Published On :

ಧಾರವಾಡ: ಧಾರವಾಡ ಇಲ್ಲಿನ ತಾಲೂಕು ಪಂಚಾಯ್ತಿ ಕೊನೆ ಅವಧಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಮ್ಮಿನಬಾವಿ ಕ್ಷೇತ್ರದ ಸುಮಿತ್ರಾಬಾಯಿ ಮೋಹನ ಗೋಸಲ, ಉಪಾಧ್ಯಕ್ಷರಾಗಿ ಗರಗ ಕ್ಷೇತ್ರದ ಮಹೇಶ ನಾರಾಯಣ ಎಲಿಗಾರ ಅವಿರೋಧ ಆಯ್ಕೆಯಾದರು.
ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚುನಾವಣಾ ಅಧಿಕಾರಿ,  ಉಪ ವಿಭಾಗಾಧಿಕಾರಿ ಮಹೇಶ ಕರ್ಜಗಿ, ಕಳೆದ ಜು. 11ರಂದು ನಡೆಯಬೇಕಿದ್ದ ಈ ಚುನಾವಣೆ ಕೋರಂ ಅಭಾವದಿಂದ ಮುಂದೂಡಲ್ಪಟ್ಟಿತ್ತು. ಗುರುವಾರ ನಿಗದಿಯಾಗಿದ್ದ ಚುನಾವಣೆ ಪ್ರಕ್ರಿಯೆಯನ್ನು ಕಾನೂನು ಅಡಿಯಲ್ಲಿ ಕೋರಂ ಅಭಾವಿದ್ದರೂ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಇಂದಿನ ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲ ಸದಸ್ಯರು ಹಾಜರಾಗುವ ಮೂಲಕ ಎಲ್ಲವೂ ಸುಸೂತ್ರವಾಗಿ ನೆರವೇರಿತು ಎಂದರು.
ಅನುಸೂಚಿತ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾಬಾಯಿ ಗೋಸಲ್ ನಾಮಪತ್ರ ಸಲ್ಲಿದ್ದರು. ಹಿಂದುಳಿದ ಪ್ರವರ್ಗ 1ಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಮಹೇಶ ಎಲಿಗಾರ, ರಾಮಣ್ಣ ಘಾಟಿನ್ ನಾಮಪತ್ರ ಸಲ್ಲಿಸಿದ್ದರು. ರಾಮಣ್ಣ ಘಾಟೀನ ನಾಮಪತ್ರ ಹಿಂಪಡೆದ ಕಾರಣ ಉಪಾಧ್ಯಕ್ಷ ಸ್ಥಾನಕ್ಕೂ ಅವಿರೋಧ ಆಯ್ಕೆ ನಡೆಯಿತು ಎಂದರು.
ನೂತನ ಅಧ್ಯಕ್ಷ ಸುಮಿತ್ರಾಬಾಯಿ ಗೋಸಲ್ ಮಾತನಾಡಿ, ತಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪಕ್ಷಭೇದ ಮರೆತು ಶ್ರಮಿಸುವುದಾಗಿ ಭರವಸೆ ನೀಡಿದರು. ತಾಪಂ ಸದಸ್ಯರಾಗಿ ಆಯ್ಕೆಯಾಗಿರುವ ಹಿರಿಯ ಮಾರ್ಗದರ್ಶನ ಹಾಗೂ ಕಿರಿಯರ ಸಹಕಾರ, ಅಧಿಕಾರಿಗಳ ಸಲಹೆ-ಸೂಚನೆ ಅಗತ್ಯ. ಈ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಾಲೂಕಿನ ಅಭಿವೃದ್ಧಿಗೆ ಗಮನ ಹರಿಸುವುದಾಗಿ ತಿಳಿಸಿದರು.
ಉಪಾಧ್ಯಕ್ಷ ರಾಮಣ್ಣ ಘಾಟನ್ ಮಾತನಾಡಿ, ಸರ್ಕಾರಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಬೇಕು. ಈ ನಿಟ್ಟಿನಲ್ಲಿ ತಾಪಂ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆಂದರು. ಆಯ್ಕೆ ಘೋಷಣೆ ಆಗುವುದೇ ತಡ ತಾಪಂ ಕಚೇರಿ ಹೊರಗಡೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.