ಬ್ಯಾಂಕ್ ಖಾಸಗೀಕರಣ ವಿರುದ್ಧ ಹೋರಾಡಿ
ಹುಬ್ಬಳ್ಳಿ: ಬ್ಯಾಂಕುಗಳನ್ನ್ನು ಖಾಸಗೀಕರಣಗೊಳಿಸುವ ಮೂಲಕ ದಲಿತರ ಹಕ್ಕುಗಳನ್ನ್ನು ಶಮನಗೊಳಿಸುವ ಕುತಂತ್ರ ನಡೆಯುತ್ತಿದ್ದು, ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಖಾಸಗೀಕರಣಗೊಳ್ಳುವುದರ ವಿರುದ್ಧ ದಲಿತರು ಹೋರಾಟ ಮಾಡಬೇಕಿದೆ ಎಂದು ಅಖಿಲ ಭಾರತ ಸಿಂಡಿಕೇಟ್ ಬ್ಯಾಂಕ್ ಪರಿಶಿಷ್ಟ ನೌಕರರ ಕಲ್ಯಾಣ ಸಂಘದ ರಾಷ್ಟ್ರೀಯ ಅಧ್ಯಕ್ಷ ಏಕನಾಥ ಕಾಂಬ್ಳೆ ಹೇಳಿದರು.
ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯ ಮಂಡಳಿಯ ಚಂದ್ರವದನ ದೇಸಾಯಿ ಸಭಾಂಗಣದಲ್ಲಿ ಭಾನುವಾರದಿಂದ ಪ್ರಾರಂಭಗೊಂಡ ಅಖಿಲ ಭಾರತ ಸಿಂಡಿಕೇಟ್ ಬ್ಯಾಂಕ್ ಪರಿಶಿಷ್ಟ ನೌಕರರ ಕಲ್ಯಾಣ ಸಂಘದ ಎರಡು ದಿನಗಳ ಕೇಂದ್ರ ಕಾರ್ಯಕಾರಿ ಮಂಡಳಿಯ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಬ್ಯಾಂಕುಗಳ ಖಾಸಗೀಕರಣದಿಂದಾಗಿ ಪರಿಶಿಷ್ಟರ ಮೀಸಲಾತಿಗೆ ಧಕ್ಕೆ ಉಂಟಾಗುತ್ತದೆ. ದಲಿತರ ಅಸ್ತಿತ್ವಕ್ಕೆ ಧಕ್ಕೆ ತರುವ ಬಂಡವಾಳಶಾಹಿಗಳ ಖಾಸಗೀಕರಣದ ವಿರುದ್ಧ ಹೋರಾಡಲು ಸನ್ನ್ನದ್ಧರಾಗಬೇಕು ಎಂದು ತಿಳಿಸಿದರು. ಸಿಂಡಿಕೇಟ್ ಬ್ಯಾಂಕಿನ ಕ್ಷೇತ್ರೀಯ ಕಾರ್ಯಾಲಯದ ಎಜಿಎಂ ರವೀಂದ್ರನಾಥ, ಸಿಂಡಿಕೇಟ್ ಬ್ಯಾಂಕ್ ದೇಶದ ಆರ್ಥಿಕ ಚಟುವಟಿಕೆಯಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದರು. ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ನೌಕರರು ಪ್ರಾಮಾಣಿಕ ಪ್ರಯತ್ನ್ನ ಮಾಡಬೇಕು ಎಂದು ಹೇಳಿದರು. ಸಂಘದ ರಾಷ್ರೀಯ ಸಲಹೆಗಾರ ಕೆ.ವೈ. ನಾಗಯ್ಯ ಮಾತನಾಡಿದರು. ಸಂಘದ ಅಧ್ಯಕ್ಷ ಆರ್.ಎಸ್. ಬರ್ವಾ ಅಧ್ಯಕ್ಷತ್ನೆ ವಹಿಸಿದ್ದರು. ಜಿ.ಎಲ್. ನಾಗೇಂದ್ರಪ್ಪ ಸ್ವಾಗತಿಸಿದರು. ಗೋಪಾಲ ನಾಯಕ ನಿರೂಪಿಸಿದರು. ಸತ್ಯಬಾಬು ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

