ಹಾರೋಬೆಳವಡಿ ಬಳಿ ಅಪಘಾತ: ರಸ್ತೆ ತಡೆ
ಧಾರವಾಡ: ತಾಲೂಕಿನ ಹಾರೋಬೆಳವಡಿ ಬಳಿ ನಡೆದ ಅಪಘಾತವೊಂದಕ್ಕೆ ಸಂಬಂಧಿಸಿದಂತೆ ಕೆಲ ಹೊತ್ತು ರಸ್ತೆ ತಡೆ ಮಾಡಿದ ಘಟನೆ ಶನಿವಾರ ಸಂಜೆ ನಡೆದಿದೆ.
ಬೋಲೆರೋ ವಾಹನವು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು. ಅಪಘಾತ ಸಂಭವಿಸಿದ ಬಳಿಕ ಬೋಲೆರೋ ವಾಹನ ತಡೆದ ಗ್ರಾಮಸ್ಥರು ಚಾಲಕನನ್ನು ಥಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಚಾಲಕ ಪರಾರಿಯಾಗಿದ್ದಾನೆ. ಇದಾದ ಬಳಿಕ ಗ್ರಾಮಸ್ಥರು ಸವದತ್ತಿ-ಧಾರವಾಡ ಮಾರ್ಗದ ರಸ್ತೆ ತಡೆ ನಡೆಸಿದ್ದರಿಂದ ಈ ಮಾರ್ಗವಾಗಿ ಸಂಚರಿಸುವ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಹಾರೋಬೆಳವಡಿ ಗ್ರಾಮದಲ್ಲಿ ಎರಡು ತಿಂಗಳಲ್ಲಿ ಏಳು ಅಪಘಾತ ಸಂಭವಿಸಿದ್ದು, ಗ್ರಾಮದ ಬಳಿ ಹಾದು ಹೋಗಿರುವ ಹೆದ್ದಾರಿಯಲ್ಲಿ ರಸ್ತೆ ತಡೆ ಹಾಕದಿರುವುದು ಇದಕ್ಕೆ ಕಾರಣವೆಂದು ಗ್ರಾಮಸ್ಥರು ದೂರಿದರು. ನಂತರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಭಾಯಿಸಿದರು. ಅಪಘಾತದಲ್ಲಿ ಗಾಯಗೊಂಡಿದ್ದ ಸಂತೋಷ ಪಟ್ಟಿಗೋಳ ಹಾಗೂ ಪ್ರದೀಪ ಪಟ್ಟಿಗೋಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

