ಧಾರವಾಡ

ಮರ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಲಿ: ಭಟ್

Published On :

ನವಲಗುಂದ: ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯಾ ಸ್ಫೋಟ ಮತ್ತು ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಆದ್ದರಿಂದ ನಾವೆಲ್ಲ ಭವಿಷ್ಯದಲ್ಲಿ ಆರೋಗ್ಯದಿಂದ ಬದುಕಬೇಕಾದರೆ ಶುದ್ಧ ಪರಿಸರದ ಅವಶ್ಯವಿದೆ ಎಂದು ಸ್ಥಳೀಯ ಜೆಎಂಎಫ್ ಸಿ ನ್ಯಾಯಾಲಯದ ದಿವಾಣಿ ನ್ಯಾಯಾಧೀಶ ಬಾಲಚಂದ್ರ ಭಟ್ ಹೇಳಿದರು.
ಇಲ್ಲಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಪೊಲೀಸ್ ಮತ್ತು ಶಿಕ್ಷಣ ಇಲಾಖೆಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ನೆರವು ಹಾಗೂ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಮನೆ ಮುಂದೆ ಸಸಿ ನೆಡುವುದು ಹಾಗೂ ಗ್ರಾಮಕ್ಕೊಂದರಂತೆ ಕಾಡು ಬೆಳೆಸುವುದನ್ನು ನಮ್ಮ ಕರ್ತವ್ಯವೆಂದು ತಿಳಿದುಕೊಂಡು ಪ್ರತಿಯೊಬ್ಬರೂ ಮರಗಳನ್ನು ಬೆಳೆಸಬೇಕೆಂದರು. ನ್ಯಾಯವಾದಿ ಕೆ.ಎನ್. ಕರ್ಜಗಿ ಮಾತನಾಡಿ, ಕಾನೂನಿನ ಅಜ್ಞಾನದಿಂದಾಗಿ ಇಂದು ಪರಿಸರ ನಾಶವಾಗುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಅರಣ್ಯ ರಕ್ಷಣೆ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತಂದಾಗ ಮಾತ್ರ ಪರಿಸರ ಬೆಳವಣಿಗೆ ಮತ್ತು ರಕ್ಷಣೆ ಮಾಡಲು ಸಾಧ್ಯ ಎಂದರು. ವಕೀಲರ ಸಂಘದ ಅಧ್ಯಕ್ಷ ಪಿ.ಬಿ.  ಯಾವಗಲ್ಲ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕ ಐ.ಎಂ. ಮಠಪತಿ, ಸಿಪೈ ಎಸ್.ಎಸ್. ಪಡೋಳಕರ, ವಕೀಲ ವಿ.ಟಿ. ಕುಲಕರ್ಣಿ, ಎಸ್.ಕೆ. ಕುರಹಟ್ಟಿ, ಎ.ಬಿ. ಕೊಪ್ಪದ, ಆರ್.ಎಸ್. ನಾಗಶೆಟ್ಟಿ, ಎಚ್.ಕೆ. ದೊಡ್ಡಮನಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.