ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಧಾರವಾಡ: ನಗರದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗಾಗಿ ಇಲ್ಲಿಯ ಪ್ರತಿಭಾ ಪ್ರತಿಷ್ಠಾನ ಸಂಸ್ಥೆಯ ವತಿಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ, ಪಿಯುಸಿ, ಸ್ನಾತಕ ಹಾಗೂ ಸ್ನಾತಕೋತ್ತರ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮಾಳಮಡ್ಡಿಯ ಕೋಟ್ಯಾಳ ಅಂಗಡಿಯ ಎಸ್.ಆರ್. ಮಣ್ಣೂರಕರ ಅವರ ಬಳಿ ಜೂ.25 ರೊಳಗಾಗಿ ಪಡೆಯಬಹುದು. ವಿದ್ಯಾರ್ಥಿಗಳು ಸಂಪೂರ್ಣ ಮಾಹಿತಿಯೊಂದಿಗೆ ಅರ್ಜಿ ತುಂಬಿ ತಮ್ಮ ಹಿಂದಿನ ವರ್ಷದ ಪ್ರಗತಿ ಪತ್ರದೊಂದಿಗೆ ಸಂಬಂಧಿತ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ರುಜುವಿನೊಂದಿಗೆ ಜೂ.28 ರಂದು ಸಂಜೆ 4.30 ಕ್ಕೆ ವನವಾಸಿ ರಾಮಮಂದಿರದಲ್ಲಿ ನಡೆಯುವ ಸಂದರ್ಶನಕ್ಕೆ ತಮ್ಮ ಪಾಲಕರೊಂದಿಗೆ ಹಾಜರಾಗಬೇಕು. ಮಾಹಿತಿಗೆ ಎಸ್. ಆರ್.ಮಣ್ಣೂರಕರ (9343336976) ಅಥವಾ ವೆಂಕಟೇಶ ದೇಸಾಯಿ (9448801195) ಅವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

