ಧಾರವಾಡ

ಬಿಜೆಪಿ ಮತ್ತೆ ಅಧಿಕಾರಕ್ಕೆ: ಶೆಟ್ಟರ್ ಭವಿಷ್ಯ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 16
ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ನಡೆಸಬೇಕು ಎಂದು ಸಲಹೆ ನೀಡಿದರು.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲು ಹಾಗೂ ಧಾರವಾಡ ಲೋಕಸಭೆ ಸಂಸದ ಪ್ರಹ್ಲಾದ ಜೋಶಿ ಸತತ ಮೂರು ಬಾರಿ ಗೆಲವು ಸಾಧಿಸಲು ಕಾರ್ಯಕರ್ತರ ಪರಿಶ್ರಮವೇ ಕಾರಣ. ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿಯೂ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.
ನಾಗೇಶ ಕಲಬುರ್ಗಿ, ಮಹಾನಗರ ಜಿಲ್ಲಾಧ್ಯಕ್ಷ ಲಿಂಗರಾಜ ಪಾಟೀಲ, ಮಲ್ಲಿಕಾರ್ಜುನ ಸಾವಕಾರ, ಸಿದ್ದು ಮೊಗಲಿಶೆಟ್ಟರ, ಡಾ. ಪಾಂಡುರಂಗ ಪಾಟೀಲ, ಮೀನಾಕ್ಷಿ ವಂಟಮೂರಿ, ಜಯಾ ಕೀರ್ತಿ, ದತ್ತಮೂರ್ತಿ ಕುಲಕರ್ಣಿ, ಸುದರ್ಶನ ದಿನ್ನೆಹಳ್ಳಿ, ಚನ್ನು ನರಗುಂದ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.