ಒಳಚರಂಡಿ ಕಾಮಗಾರಿ ಪರಿಶೀಲಿಸಿದ ಅಬ್ಬಯ್ಯ
ಹುಬ್ಬಳ್ಳಿ: ನಗರದಲ್ಲಿ ನಡೆಸುತ್ತಿರುವ ಒಳಚರಂಡಿ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿನ ಸಿಬಿಟಿ, ಜಂಗಲಿಪೇಟ, ಬಂಕಾಪೂರ ಚೌಕ, ಬಿಡ್ನ್ನಾಳ, ಶ್ರೀರಾಮ ಕಾಲೋನಿ, ಈಶ್ವರ ನಗರ, ಎಸ್.ಎಂ. ಕೃಷ್ಣಾ ನಗರ, ಬಾಣತಿಕಟ್ಟೆ, ಪಿಬಿ ರಸ್ತೆ, ಸುಭಾಷ ನಗರ, ಕೆಂಪಗೇರಿ ಕೆರೆ ಸೇರಿದಂತೆ ಹಲವು ಬಡಾವಣೆಗಳಲ್ಲಿ ಪ್ರಾರಂಭವಾಗಿರುವ ಒಳಚರಂಡಿ ಕಾಮಗಾರಿಯನ್ನು ಬುಧವಾರ ಪರಿಶೀಲಿಸಿದ ಶಾಸಕ ಅಬ್ಬಯ್ಯ, ಶೀಘ್ರ ಹಾಗೂ ಉತ್ತಮ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತ್ತೀಚೆಗೆ ಸುರಿದ ಭಾರಿ ಮಳೆಗೆ ನಾಲಾ ನೀರು ಮನೆಗಳಿಗೆ ನುಗ್ಗಿದ ಪ್ರದೇಶ ಈಶ್ವರ ನಗರಕ್ಕೆ ಇದೇ ಸಂದರ್ಭದಲ್ಲಿ ಭೇಟಿ ನೀಡಿದ ಶಾಸಕರು, ನಾಲಾ ಸ್ವಚ್ಛತೆ ಪರಿಶೀಲಿಸಿದರು. ಪಾಲಿಕೆ ಸದಸ್ಯ ಮಂಜುನಾಥ ಚಿಂತಗಿಂಜಲ, ದಶರಥ ವಾಲಿ, ಒಳಚರಂಡಿ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರ ಎಲ್.ಆರ್. ನಾಯಕ, ಪಾಲಿಕೆಯ ಕಾರ್ಯ ನಿರ್ವಾಹಕ ಅಭಿಯಂತರ ಗಣಾಚಾರಿ, ಮುಖಂಡರಾದ ಪ್ರಕಾಶ ಬುರಬುರೆ, ಧರ್ಮಣ್ಣ ದೊಡಮನಿ, ಬಾಬಾಜಾನ ಮುಧೋಳ, ನಜೀರ ಹೊನ್ಯಾಳ, ಜ್ಯೋತಿಬಾ ಶಿಂಧೆ ಹಾಗೂ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

