ಧಾರವಾಡ

ದರ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published On :

ಹುಬ್ಬಳ್ಳಿ: ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆಯುವಷ್ಟರಲ್ಲಿ ರೈಲು ಪ್ರಯಾಣ ದರ, ಸಿಮೆಂಟ್, ಡೀಸೆಲ್, ಗ್ಯಾಸ್ ಸಿಲೆಂಡರ್ ಮತ್ತಿತರ ಬೆಲೆ ಏರಿಕೆ ಮಾಡಿದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಚೆನ್ನಮ್ಮ ವೃತ್ತದಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾನಿರತರು, ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿದರು. ಜನಸಾಮಾನ್ಯರಿಗೆ ಒಳ್ಳೆಯ ದಿನಗಳು ಬರಲಿವೆಯೆಂದು ಹೇಳುತ್ತ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಬೆಲೆ ಏರಿಕೆ ಮಾಡಿದ ಎನ್‌ಡಿಎ ಸರ್ಕಾರ, ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು. ನಮೋ ಜಪಿಸುತ್ತಿದ್ದ ನಾಗರಿಕರು ಇದೀಗ ಬೆಲೆ ಏರಿಕೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್‌ಡಿಎ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು. ದರ ಏರಿಕೆ ಕ್ರಮವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಬೆಲೆ ಏರಿಕೆಗೆ ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಮೇಲೆ ಗೂಬೆ ಕೂರಿಸುವುದನ್ನು ಎನ್‌ಡಿಎ ಸರ್ಕಾರ ಬಿಡಬೇಕು. ದೇಶದ ಜನಹಿತದ ಬಗ್ಗೆ ಎನ್‌ಡಿಎ ಸರ್ಕಾರಕ್ಕೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಬೆಲೆ ಏರಿಕೆ ಕ್ರಮ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ, ಅನ್ವರ ಮುಧೋಳ, ಪಾರಸಮಲ್ ಜೈನ್, ಮಹೇಂದ್ರ ಸಿಂಘಿ, ಸದಾನಂದ ಡಂಗನವರ, ಶಾರುಖ್ ಮುಲ್ಲಾ, ಬಾಬಾಜಾನ ಮುಧೋಳ, ಸುಧಾ ಮಣಿಕುಂಟ್ಲ, ಸುವರ್ಣ ಕಲಕುಂಟಲ, ಅನಿತಾ ಗುಂಜಾಳ, ಶಫೀ ಮುದ್ದೇಬಿಹಾಳ, ಆನಂದ ಮೂಶಣ್ಣವರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.