ಬೇಂದ್ರೆ ಬಸ್‌ಗಳ ಪರವಾನಗಿ ರದ್ದಿಗಾಗಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 25
ಹುಬ್ಬಳ್ಳಿ-ಧಾರವಾಡ ಮಧ್ಯೆ ಸಂಚರಿಸುತ್ತಿರುವ ಬೇಂದ್ರೆ ಖಾಸಗಿ ಬಸ್‌ಗಳ ಸಂಚಾರ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಸಾರಿಗೆ ನೌಕರರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಅವಳಿ ನಗರದ ಮಧ್ಯೆ ಈಗಾಗಲೇ ಸಾರಿಗೆ ಸಂಸ್ಥೆಯ 120 ಬಸ್‌ಗಳು ಸಂಚರಿಸಲಿವೆ. ಇದರೊಂದಿಗೆ ಬಿಆರ್‌ಟಿಎಸ್‌ನ ಇನ್ನೂ 130 ಬಸ್‌ಗಳು ರಸ್ತೆಗಿಳಿಯಲಿವೆ. ಪ್ರಯಾಣಿಕರಿಗೆ ಸಮರ್ಪಕ ಸೇವೆ ಒದಗಿಸುತ್ತಿರುವ ಸಾರಿಗೆ ಸಂಸ್ಥೆಗೆ ಬೇಂದ್ರೆ ಖಾಸಗಿ ಬಸ್‌ಗಳಿಂದ ಸಾಕಷ್ಟು ಹಾನಿಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಬಿಆರ್‌ಟಿಎಸ್ ವಾಹನಗಳ ಸಂಚಾರಕ್ಕೆ ಅವಳಿ ನಗರದ ಮಧ್ಯೆ ಪ್ರತ್ಯೇಕ ಮಾರ್ಗ ನಿರ್ಮಿಸಲಾಗುತ್ತಿದೆ. ಬೇಂದ್ರೆ ಖಾಸಗಿ ಬಸ್‌ಗಳು ಮಿಕ್ಸಡ್ ವಾಹನಗಳ ಮಾರ್ಗದಲ್ಲಿ ಸಂಚರಿಸಬೇಕಿರುವುದರಿಂದ ಅಪಘಾತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಬೇಂದ್ರೆ ಬಸ್‌ಗಳ ಪರವಾನಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಗೋಕುಲ ರಸ್ತೆಯ ವಾಯವ್ಯ ಸಾರಿಗೆ ಸಂಸ್ಥೆ ಕಚೇರಿಯಿಂದ ಮಿನಿವಿಧಾನಸೌಧದವೆರೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಸಂಸ್ಥೆಗೆ ಆಗುತ್ತಿರುವ ಹಾನಿ ತಪ್ಪಿಸಲು ಸರ್ಕಾರಕ ತಕ್ಷಣ ಮುಂದಾಗಬೇಕು ಎಂದು ಆಗ್ರಹಿಸಿದರು. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ತಹಸೀಲ್ದಾರ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಯೂನಿಯನ್ ಪ್ರಧಾನ ಕಾರ್ಯದರ್ಶಿ ಆರ್.ಎಫ್. ಕವಳಿಕಾಯಿ, ಐ.ಬಿ. ಶಿರನಳ್ಳಿ, ಎಂ.ಕೆ. ಮುಳವಾಡ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

