ಅತ್ಯಾಚಾರ ಸಾಬೀತು: ಆರೋಪಿಗೆ ಹತ್ತು ವರ್ಷ ಸಜೆ
ಧಾರವಾಡ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅತ್ಯಾಚಾರಿ ಹುಬ್ಬಳ್ಳಿ ಮೂಲದ ಬಸವರಾಜ ಹುಡೇದ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಇಲ್ಲಿಯ ಜಿಲ್ಲಾ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆ ಬಳಿಕ ನ್ಯಾಯಾಧೀಶರಾದ ರಮೇಶಕುಮಾರ, ಅತ್ಯಾಚಾರ ಆರೋಪಿ ಬಸವರಾಜ ಹುಡೇದನಿಗೆ ಶಿಕ್ಷೆ ಪ್ರಕಟಿಸಿದರು. ಕಾರಾಗೃಹ ಶಿಕ್ಷೆಯೊಂದಿಗೆ ರು. 60 ಸಾವಿರ ದಂಡ ವಿಧಿಸಿದ್ದಾರೆ. ಈ ಹಣದಲ್ಲಿ ರು. 50 ಸಾವಿರ ನಗದು ಬಾಲಕಿಗೆ ನೀಡುವಂತೆ ಆದೇಶಿಸಿರುವ ಅವರು, ದಂಡ ತುಂಬಲು ತಪ್ಪಿದರೆ ಹೆಚ್ಚುವರಿ ಎರಡು ವರ್ಷ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪದ ಶಿವ ಕಾಲೋನಿಯ ನಿವಾಸಿ ಬಸವರಾಜ ಹುಡೇದ (23) 2013ರಲ್ಲಿ ಹುಬ್ಬಳ್ಳಿಯ 16 ವರ್ಷದ ಬಾಲಕಿಯೊಬ್ಬಳನ್ನು ಗೋಕರ್ಣಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದನು. ಈ ಕುರಿತು ಬಾಲಕಿಯ ತಂದೆ ಸೆಪ್ಟೆಂಬರ್ 22ರಂದು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಬಸವರಾಜನನ್ನು ಕಲಘಟಗಿ ಬಳಿಯ ಗ್ರಾಮವೊಂದರಲ್ಲಿ ಆರೋಪಿಯನ್ನು ಬಂಧಿಸಿದ್ದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ಸಾಬೀತಾಗಿತ್ತು. ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಷ ಪಟ್ಟಿ ಸಲ್ಲಿಸಲಾಗಿತ್ತು. ಸೋಮವಾರ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.
ಅಕ್ರಮ ಮದ್ಯ ವಶ
ಕಲಘಟಗಿ: ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿ ಬೋಗೇನಾಗರಕೊಪ್ಪ ಕ್ರಾಸ್ ಹತ್ತಿರ ಆರೋಪಿ ಚಂದ್ರಪ್ಪ ಕರೆಪ್ಪ ಕಿಳ್ಳಿಕ್ಯಾತರ ಬೈಕ್ ಮೇಲೆ ಅಕ್ರಮವಾಗಿ ರು. 2,318 ಮೌಲ್ಯದ ಮದ್ಯದ ಪ್ಯಾಕೆಟ್ ಹೊತ್ತೊಯ್ಯುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

