ಇಂದು ಸಮ್ಮೇಳನ ಉದ್ಘಾಟನೆ
ಅಣ್ಣಿಗೇರಿ: ಸ್ಥಳೀಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಮೊಟ್ಟ ಮೊದಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ. 6ರಂದು ನಡೆಯಲಿದೆ. ಬೆಳಗ್ಗೆ 8ಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ಪರಿಷತ್ ಧ್ವಜಾರೋಹಣ ಮಾಡುವರು. ನಂತರ ಭವ್ಯ ಮೆರವಣಿಗೆಯ ಮೂಲಕ ಸಮ್ಮೇಳನದ ಅಧ್ಯಕ್ಷ ಪ್ರೊ. ಎಸ್.ಎಸ್. ಹರ್ಲಾಪುರರನ್ನು ಪಂಪ ಸ್ಮಾರಕ ಭವನಕ್ಕೆ ಕರೆತರಲಾಗುವುದು. ಕವಿವಿ ಕನ್ನಡ ಅಧ್ಯಯನ ಪೀಠದ ವಿಶ್ರಾಂತ ಮುಖ್ಯಸ್ಥ ಡಾ. ವೀರಣ್ಣ ರಾಜೂರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಣ್ಣಿಗೇರಿ ದಾಸೋಹಮಠದ ಶಿವಕುಮಾರ ಶ್ರೀಗಳು, ಅಡ್ನೂರ ಪಂಚಾಕ್ಷರಿ ಶಿವಾಚಾರ್ಯ ಶ್ರೀಗಳು ಸಾನ್ನಿಧ್ಯ ವಹಿಸುವರು. ಶಾಸಕ ಎನ್.ಎಚ್. ಕೋನರಡ್ಡಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ಪುರಸಭೆ ಮಾಜಿ ಸದಸ್ಯ ಶಿವಶಂಕರ ಕಲ್ಲೂರ ಸಾಹಿತ್ಯ ಕೃತಿ ಚುಟುಕು ಬಿಡುಗಡೆ ಮಾಡಲಿದ್ದಾರೆ. ಸಚಿವ ದಿನೇಶ ಗುಂಡೂರಾವ್, ಸಂಸದ ಪ್ರಹ್ಲಾದ ಜೋಶಿ, ವಿಪ ಸದಸ್ಯ ಬಸವರಾಜ ಹೊರಟ್ಟಿ, ವೀರಣ್ಣ ಮತ್ತಿಕಟ್ಟಿ, ಶ್ರೀನಿವಾಸ ಮಾನೆ, ನಾಗರಾಜ ಛಬ್ಬಿ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಡಾ.ಎ.ಡಿ. ಧಾರವಾಡ ವಹಿಸಲಿದ್ದಾರೆ. ಮಧ್ಯಾಹ್ನ 4ರವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಸಂಜೆ 5.30ಕ್ಕೆ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಪಂಚಗ್ರಹ ಹಿರೇಮಠ ಸಂಸ್ಥಾನಮಠದ ಸಿದ್ದೇಶ್ವರ ಶಿವಾಚಾರ್ಯ ಶ್ರೀಗಳು ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

