ಧಾರವಾಡ

ಎಬಿವಿಪಿ ಪ್ರತಿಭಟನೆ

Published On :

ಧಾರವಾಡ: ಹಲವು ಕಾಲೇಜುಗಳಲ್ಲಿ ಭಾಷಾ ಹಾಗೂ ಅಲ್ಪಸಂಖ್ಯಾತರಿಗೆ ಮೀಸಲಿರುವ ಸೀಟುಗಳ ದುರುಪಯೋಗವಾಗುತ್ತಿವೆ ಎಂದು ಆರೋಪಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಧರ್ಮ, ಭಾಷೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವಾರು ಭಾಷಾ ಹಾಗೂ ಅಲ್ಪಸಂಖ್ಯಾತ ಕಾಲೇಜುಗಳಿವೆ. ಆದರೆ ಅಲ್ಲಿ ನಿಯಮಗಳನ್ನು ಗಾಳಿಗೆ ತೂರಿ ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳನ್ನು ಆಡಳಿತ ಮಂಡಳಿಯವರು ಹಣದಾಸೆಗೆ ಮಾರುತ್ತಿರುವುದು ಕಂಡುಬರುತ್ತಿದೆ. ಭಾಷೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೋಸ ಮಾಡಿದ ಕಾಲೇಜುಗಳ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಹೇಶ ಹೆಂಬ್ಲಿ, ನಾಗರಾಜ, ವಿನಾಯಕ, ಕಲ್ಮೇಶ, ರವಿ, ಸಂತೋಷ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇಂದು ಕಾನೂನುಅರಿವು- ನೆರವು ಕಾರ್ಯಕ್ರಮ
ಹುಬ್ಬಳ್ಳಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮೃದ್ಧಿ ತಾಲೂಕು ಗ್ರಾಮೀಣ ಸ್ತ್ರೀ ಶಕ್ತಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮಾ. 8ರಂದು 12.30ಕ್ಕೆ ಉಣಕಲ್ನ ಸ್ತ್ರೀಶಕ್ತಿ ಭವನದಲ್ಲಿ ಕಾನೂನು ಅರಿವು- ನೆರವು ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನ್ನು ಹುಬ್ಬಳ್ಳಿಯ ಕಾರ್ಮಿಕ ನ್ಯಾಯಾಲಯದ ಪೀಠಾಧಿಕಾರಿ ಬಿ. ಎಸ್. ಭಾರತಿ ಉದ್ಘಾಟಿಸಲಿದ್ದಾರೆ. ಹಿರಿಯ ವಿಭಾಗದ ಪ್ರಧಾನ ದಿವಾಣಿ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಎಸ್.ಎನ್. ಕಲ್ಕಣಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಸಿ. ಆರ್. ಪಾಟೀಲ, ಕಾರ್ಯದರ್ಶಿಗಳಾದ ಪಿ. ಎಚ್. ತೋಟದ, ಸಹಾಯಕ ಅಭಿಯೋಜಕರಾದ ಎಸ್.ಬಿ. ದಯಣ್ಣವರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ  ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಿ.ಎಸ್. ಶೆಟ್ಟಪ್ಪನವರ ಅವರು ಪಾಲ್ಗೊಳ್ಳಲಿದ್ದು, ತಾಲೂಕು ಗ್ರಾಮೀಣ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಸವಿತಾ ಪಾಟೀಲ ಅವರು ಉಪನ್ಯಾಸ ನೀಡಲಿದ್ದಾರೆಂದು ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾದವಾಡ ಗ್ರಾಪಂಗೆಅವಿರೋಧ ಆಯ್ಕೆ
ಧಾರವಾಡ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಲಕಮಾಪುರ ಗ್ರಾಮದ ಉಮೇಶ ಚನ್ನಪ್ಪ ವಾಲಿಕಾರ ಯಾದವಾಡ ಗ್ರಾಮ ಪಂಚಾಯತಿ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.