ಧಾರವಾಡ

ಬಾಪೂಜಿ ಶಾಲಾ ಕಟ್ಟಡಕ್ಕೆ ರು. 5 ಲಕ್ಷ: ಶಾಸಕ ಎನ್.ಎಚ್. ಕೋನರಡ್ಡಿ

Published On :

ಅಣ್ಣಿಗೇರಿ: ಸ್ಥಳೀಯ ಮಾಡರ್ನ್ ಶಿಕ್ಷಣ ಸಂಸ್ಥೆಯ ಬಾಪೂಜಿ ವಿದ್ಯಾನಿಕೇತನ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಬಾಪೂಜಿ ಉತ್ಸವ ಹಮ್ಮಿಕೊಳ್ಳಲಾಗಿತ್ತು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಮೂಲ ಶಿಕ್ಷಣದ ಕೊರತೆಯಿಂದ ಶಿಕ್ಷಣ ವ್ಯವಸ್ಥೆ ಅವಸಾನದ ಅಂಚಿಗೆ ತಲುಪುತ್ತಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಪಾಲಕರು, ಶಿಕ್ಷಕರು ಪ್ರಯತ್ನಿಸಬೇಕಿದೆ ಎಂದರು.
ಬಾಪೂಜಿ ಶಾಲಾ ಕಟ್ಟಡ ನಿರ್ಮಾಣಕ್ಕೆ ತಮ್ಮ ಶಾಸಕರ ಅನುದಾನದಿಂದ ರು. 5 ಲಕ್ಷ ನೀಡುವುದಾಗಿಯೂ ಇದೇ ಸಂದರ್ಭದಲ್ಲಿ ಕೋನರಡ್ಡಿ ಭರವಸೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಸಹ ನಿರ್ದೇಶಕ ಜಿ.ಆರ್. ಕೆಂಚರಡ್ಡಿ, ಗ್ರಾಮೀಣ ಭಾಗದ ಮಕ್ಕಳು ನಗರ ಪ್ರದೇಶದ ಮಕ್ಕಳಿಗೆ ವಿದ್ಯಾರ್ಜನೆಯಲ್ಲಿ ಸರಿಸಾಟಿಯಾಗಿ ನಿಲ್ಲುವ ನಿಟ್ಟಿನಲ್ಲಿ ಬಾಪೂಜಿ ಶಾಲೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಮಾಯಾಚಾರಿ, ಮಕ್ಕಳಲ್ಲಿ ಸಂಸ್ಕಾರ, ಮಾನವೀಯ ಮೌಲ್ಯ, ನೀತಿಬೋಧನೆ ಅತ್ಯಂತ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಸಾಧನೆಗೈಯುವಲ್ಲಿ ಪಾಲಕ ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ಮೇಘನಾ ಪಾಟೀಲ, ಸ್ವಾಲಿಹಾ ಶಿರಹಟ್ಟಿ, ಫಕ್ಕಿರೇಶ ಕರವೀರಮಠ ಅವರನ್ನು ಸನ್ಮಾನಿಸಲಾಯಿತು. ಪ್ರೊ. ಎಸ್.ಎಸ್. ಹರ್ಲಾಪುರ, ಡಾ. ಜಿ.ಎಂ. ಪಾಟೀಲ, ಡಾ. ಎ.ಡಿ. ಧಾರವಾಡ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.