ಧಾರವಾಡ

ಶಾಂತಿಯಿಂದ ಹೋಳಿ ಆಚರಿಸಿ

Published On :

ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿನ ಜನತೆ ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಮೇಯರ್ ಶಿವು ಹಿರೇಮಠ ಮನವಿ ಮಾಡಿದ್ದಾರೆ.
ಹಿಂದಿನಿಂದಲೂ ಅವಳಿ ನಗರಗಳ ಜನತೆ ಎಲ್ಲ ಧರ್ಮಗಳ ಹಬ್ಬಗಳನ್ನು ನಾಡ ಹಬ್ಬದಂತೆ ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ.  ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು ಪರೀಕ್ಷೆ ತಯಾರಿಯಲ್ಲಿರುವ ವಿದ್ಯಾರ್ಥಿಗಳಿಗೆ ನಾಗರಿಕರು ಹಬ್ಬದ ಹೆಸರಿನಲ್ಲಿ ಶಬ್ದ ಮಾಲಿನ್ಯ ಮಾಡಿ ತೊಂದರೆ ಮಾಡಬಾರದು.  ಮತ್ತು ಹಬ್ಬದ ಸಮಯದಲ್ಲಿ ಅಪಾಯಕಾರಿ ಬಣ್ಣಗಳನ್ನು ಮುಗ್ಧ ಜನರ ಹಾಗೂ ಮಹಿಳೆಯರ ಮೇಲೆ ಎರಚಿ, ಗಲಾಟೆ ಮಾಡುವುದಾಗಲಿ, ವಾಯು ಮಾಲಿನ್ಯ ಹೆಚ್ಚಿಸುವದಾಗಲಿ ಮಾಡಬಾರದು. ಹಬ್ಬದ ಸಮಯದಲ್ಲಿ ನಾಗರಿಕರ ಯೋಗಕ್ಷೇವುಕ್ಕೆ ದಿನವಿಡೀ ಶಾಂತಿ ಕಾಪಾಡುವಲ್ಲಿ ಶ್ರಮಿಸುವ ಪೊಲೀಸ್ ಸಿಬ್ಬಂದಿ ಮತ್ತು ಸಮಾಜಸೇವಾ ಸಂಘಸಂಸ್ಥೆಗಳ ಜೊತೆಗೆ ಸಹಕರಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.