ಮದುವೆಗೆ ನೀತಿಸಂಹಿತೆ ಅಡ್ಡಿಯಲ್ಲ: ಡಿಸಿ
ಧಾರವಾಡ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಮದುವೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಜಕೀಯಕ್ಕೆ ಸಂಬಂಧಿಸಿದಂತೆ ಭಾಷಣ ಮಾಡುವಂತಿಲ್ಲ ಎಂದು ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಸಮೀರ್ ಶುಕ್ಲ ಹೇಳಿದ್ದಾರೆ.
ಶುಕ್ರವಾರ ಕಲ್ಯಾಣ ಮಂಟಪ ಮತ್ತು ಸಮುದಾಯ ಭವನಗಳ ಮಾಲೀಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷ ಹಾಗೂ ವ್ಯಕ್ತಿಯ ಚಿಹ್ನೆ, ಬ್ಯಾನರ್ಸ್, ಬಂಟಿಂಗ್ಸ್ ಹಾಗೂ ಹೋರ್ಡಿಂಗ್ಸ್ಗಳನ್ನು ಕಲ್ಯಾಣ ಮಂಟಪ ಹಾಗೂ ಸಮುದಾಯ ಭವನಗಳಲ್ಲಿ ಹಾಕುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.
ಕಲ್ಯಾಣ ಮಂಟಪ ಹಾಗೂ ಸಮುದಾಯ ಭವನಗಳಲ್ಲಿ ಮದುವೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಬಹುದು. ಅಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಬಹುದು ಆದರೆ ಮತಯಾಚನೆಯಂತಹ ಯಾವುದೇ ಪ್ರಕ್ರಿಯೆಗಳು ನಡೆಯಕೂಡದು. ಇಂತಹ ಪ್ರಕ್ರಿಯೆಗಳು ಕಂಡು ಬಂದಲ್ಲಿ ಚುನಾವಣೆ ನೀತಿ ಸಂಹಿತೆಯಂತೆ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಜಾತ್ರೆಗೆ ಬೇಕು ಅನುಮತಿ: ಚುನಾವಣೆ ನೀತಿ ಸಂಹಿತೆಯ ಈ ಸಂದರ್ಭದಲ್ಲಿ ಪಟ್ಟಣ ಹಾಗೂ ಊರುಗಳಲ್ಲಿ ಜಾತ್ರೆಗಳನ್ನು ಮಾಡಬಹುದು. ಅದಕ್ಕೆ ಮುಂಚಿತವಾಗಿ ಸಂಬಂಧಿಸಿದ ಟ್ರಸ್ಟ್ ಕಮಿಟಿಯವರು ಜಿಲ್ಲಾ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದಿರಬೇಕು. ಜಾತ್ರೆಗಳಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಭೆಯಲ್ಲಿ ಚುನಾವಣಾ ವಿಶೇಷಾಧಿಕಾರಿ ಮಹಾಂತೇಶ ಬೀಳಗಿ, ಪ್ರೋಬೆಷನರಿ ಐಎಎಸ್ ಅಧಿಕಾರಿ ಚಾರುಲತಾ, ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ, ಕಲ್ಯಾಣ ಮಂಟಪ, ಸಮುದಾಯಭವನಗಳ ಮಾಲೀಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

