ಧಾರವಾಡ

ಪಾರ್ಕಿಂಗ್ ಶುಲ್ಕ ರದ್ದತಿಗೆ ಮನವಿ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮಾ. 15
ನಗರದ ಬಹುತೇಕ ರಸ್ತೆಗಳ ಅಕ್ಕಪಕ್ಕದಲ್ಲಿ ನಿಲ್ಲಿಸಲಾಗುವ ವಾಹನಗಳಿಗೆ ಆಕರಿಸಲಾಗುತ್ತಿರುವ ಪಾರ್ಕಿಂಗ್ ಶುಲ್ಕ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಕನ್ನಡಪರ ಮಹಾಮಂಡಳ ಪದಾಧಿಕಾರಿಗಳು, ಪಾಲಿಕೆ ಆಯುಕ್ತರ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು.
ವಾಹನ ಮಾಲೀಕರಿಂದ ಪಾರ್ಕಿಂಗ್ ಶುಲ್ಕವನ್ನು ಒತ್ತಾಯಪೂರ್ವಕವಾಗಿ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ, ಮಾತ್ರವಲ್ಲದೆ ಅವೈಜ್ಞಾನಿಕವೂ ಆಗಿದೆ ಎಂದು ಮಹಾಮಂಡಳದ ಅಧ್ಯಕ್ಷ ಡಿ. ಗೋವಿಂದರಾವ್ ದೂರಿದರು.
ನಗರದಲ್ಲಿ ನಿರ್ಮಾಣಗೊಂಡಿರುವ ವಾಣಿಜ್ಯ ಮಳಿಗೆಗಳಲ್ಲಿ ಪಾರ್ಕಿಂಗಿಗೆ ವ್ಯವಸ್ಥೆ ಮಾಡದೆ ಕಾನೂನು ಉಲ್ಲಂಘಿಸಲಾಗಿದೆ. ಅಂತಹ ವಾಣಿಜ್ಯ ಮಳಿಗೆಗಳ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಬೇಕಲ್ಲದೆ ಆಯಾ ವಾಣಿಜ್ಯ ಮಳಿಗೆಗಳಲ್ಲಿ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಲಾಯಿತು.
ರಸ್ತೆ ಬದಿ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿರುವುದರಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶಾಮೀಲಾಗಿದ್ದು ಅವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಪಾಲಿಕೆ ಆಯುಕ್ತರು, ತಕ್ಷಣ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳದಿದ್ದಲ್ಲಿ ಮಹಾಮಂಡಳದ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದಲ್ಲದೆ ಕಾನೂನು ಹೋರಾಟವೂ ನಡೆಸಲಾಗುವುದು ಎಂದು ಎಚ್ಚರಿಸಿದ ಮನವಿಯನ್ನು ಪಾಲಿಕೆ ಆಯುಕ್ತರಿಗೆ ಸಲ್ಲಿಸಲಾಯಿತು.
ಎಂ.ಆರ್. ಪಾಟೀಲ, ಬಿ.ಎಚ್. ನಾಗರಾಜ, ಸುಭಾಸ ಪೂಜಾರ, ಶಕುಂತಲಾ ಶೆಟ್ಟಿ, ವಿಜಯ ದುರುಗೋಜಿ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.