ಹೋಳಿ: ಗುಂಪು ಘರ್ಷಣೆ
ಕುಂದಗೋಳ: ಹೋಳಿ ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು ಘರ್ಷಣೆ ಸಂಭವಿಸಿದ ಪರಿಣಾಮ ಕೆಲಕಾಲ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣಗೊಂಡಿತ್ತು.
ಹೋಳಿ ಹಬ್ಬದ ಪ್ರಯುಕ್ತ ಗ್ರಾಮದಲ್ಲಿನ ಎಸ್ಟಿ ಕಾಲನಿ ಯುವಕರು ಬಣ್ಣದ ಸಂಭ್ರಮದಲ್ಲಿ ತೊಡಗಿರುವಾಗ ಅಲ್ಲಿಯೆ ಇದ್ದ ಇನ್ನೊಂದು ಗುಂಪಿನ ಯುವಕರಿಗೆ ಬಣ್ಣ ತಗುಲಿದೆ. ಪರಿಣಾಮ ಎರಡು ಗುಂಪಿನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದನ್ನು ನೋಡಿದ ಗ್ರಾಮಸ್ಥರು ತಕ್ಷಣ ಸಮಯ ಪ್ರಜ್ಞೆಯಿಂದ ಪರಿಸ್ಥಿತಿ ತಿಳಿಗೊಂಡಿತು. ಸೋಮವಾರ ರಾತ್ರಿ ಮತ್ತೆ ಒಂದು ಗುಂಪಿನ ಯುವಕರು ಇನ್ನೊಂದು ಗುಂಪಿನ ಯುವಕರ ಮನೆ ಹತ್ತಿರ ಹೋಗಿ ಅನುಚಿತವಾಗಿ ವರ್ತಿಸಿದ ಪರಿಣಾಮ ಘರ್ಷಣೆ ಸಂಭವಿಸಿದೆ ಎಂದು ಗೊತ್ತಾಗಿದೆ. ಈ ಕುರಿತು ಪೊಲೀಸ್ ಠಾಣೆ ಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

