ವಾಯುವಿಹಾರಿಗಳಲ್ಲಿ ಜೋಶಿ ಮತ ಯಾಚನೆ
ಹುಬ್ಬಳ್ಳಿ: ಸಾರ್ವಜನಿಕರು ವಾಯುವಿಹಾರ ನಡೆಸುತ್ತಿದ್ದ ನಗರದ ಇಂದಿರಾ ಗಾಜಿನ ಮನೆ ಹಾಗೂ ರೇಲ್ವೆ ಗಾಲ್ಫ್ ಮೈದಾನದಲ್ಲಿ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬುಧವಾರ ಬೆಳಗ್ಗೆ ಚುನಾವಣಾ ಪ್ರಚಾರ ನಡೆಸಿದರು.
ವ್ಯಾಯಾಮ ಹಾಗೂ ವಾಯು ವಿಹಾರದಲ್ಲಿ ನಿರತರಾಗಿದ್ದವರಿಗೆ ಕರಪತ್ರ ಹಂಚಿದ ಪ್ರಹ್ಲಾದ ಜೋಶಿ, ಈ ಚುನಾವಣೆಯಲ್ಲಿಯೂ ತಮಗೇ ಮತ ನೀಡುವಂತೆ ಮನವಿ ಮಾಡಿದರು. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಅವಧಿಯಲ್ಲಿ ದೇಶದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ ಜೋಶಿ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳು, ಆರ್ಥಿಕ ಹಿನ್ನಡೆ ಮತ್ತಿತರ ಘಟನೆಗಳನ್ನು ವಿವರಿಸಿದರು. ಸತತ ಎರಡು ಅವಧಿಯವರೆಗೆ ಕೇಂದ್ರದಲ್ಲಿ ಅಧಿಕಾರ ನಡೆಸಿದ ಯುಪಿಎ ಸರ್ಕಾರದ ಆಡಳಿತದಿಂದಾಗಿ ದೇಶದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ ಎಂದು ಆರೋಪಿಸಿದರು.
ನರೇಂದ್ರ ಮೋದಿ ಪ್ರಧಾನಿಯನ್ನಾಗಿಸಲು ದೇಶದಾದ್ಯಂತ ಬಿಜೆಪಿ ಹಾಗೂ ಬಿಜೆಪಿ ಬೆಂಬಲಿತ ಎನ್ಡಿಎನ ವಿವಿಧ ಪಕ್ಷಗಳ ಅಭ್ಯರ್ಥಿಗಳ ಗೆಲುವು ಆವಶ್ಯಕ. ಹೀಗಾಗಿ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತಮಗೆ ಮತ ನೀಡುವಂತೆ ಪ್ರಹ್ಲಾದ ಜೋಶಿ ಮನವಿ ಮಾಡಿದರು.
ಮಾಜಿ ಶಾಸಕರಾದ ಮೋಹನ ಲಿಂಬೆಕಾಯಿ, ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಮುಖಂಡರಾದ ಸಿದ್ದು ಮೊಗಲಿಶೆಟ್ಟರ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

