ಶಾರ್ಟ್ ಸರ್ಕ್ಯೂಟ್ನಿಂದ ಕಾರ್ಖಾನೆಗೆ ಬೆಂಕಿ
ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಹುಬ್ಬಳ್ಳಿ ನಗರದ ಗೋಕುಲ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಅಲ್ಯೂಮಿನಿಯಂ ಫ್ಯಾಕ್ಟರಿಗೆ ಬೆಂಕಿ ತಗುಲಿ ಅಂದಾಜು ರು. 6 ಲಕ್ಷ ಹಾನಿ ಸಂಭವಿಸಿದೆ. ಗೋಕುಲ ಕೈಗಾರಿಕಾ ವಸಾಹತು ಪ್ರದೇಶದ ಎರಡನೇ ಗೇಟ್ ಬಳಿ ಇರುವ ಅಶೋಕ ಮಮ್ಮಿಗಟ್ಟಿ ಅವರ ಹೈಟೇಕ್ ವ್ಯಾಪೋ ಕೋರ್ಸ್ ಎಂಬ ಅಲ್ಯೂಮಿನಿಯಂ ಕಾರ್ಖಾನೆಗೆ ಬುಧವಾರ ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ತಗುಲಿದೆ. ಬೆಂಕಿ ಆಕಸ್ಮಿಕದಲ್ಲಿ 500 ಲೀಟರ್ ಬಣ್ಣ, ಕಂಪ್ಯೂಟರ್ ಉಪಕರಣ ಸೇರಿದಂತೆ ಇನ್ನಿತರ ಉಪಕರಣಗಳು ಬೆಂಕಿಗೆ ಆಹುತಿಯಾಗಿದೆ. ಸುದ್ದಿ ತಿಳಿದ ತಕ್ಷಣಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಗೋಕುಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಜೂಜಾಟ: 11 ಜನರ ಬಂಧನ
ಧಾರವಾಡ: ತಾಲೂಕಿನ ಬೆಳ್ಳಿಗಟ್ಟಿ ಹಾಗೂ ಮಂಗಳಗಟ್ಟಿ ಗ್ರಾಮದ ಪ್ರತ್ಯೇಕ ಪ್ರದೇಶಗಳಲ್ಲಿ ಜೂಜಾಟವಾಡುತ್ತಿದ್ದ 11 ಜನರನ್ನು ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ರು. 1570 ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಗ್ರಾಮೀಣ ಹಾಗೂ ಗರಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಂಧನ: ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಕೊಪ್ಪ ಗ್ರಾಮದ ಪ್ಯಾಟಿ ಓಣಿಯಲ್ಲಿ ಜೂಜಾಡುತ್ತಿದ್ದ 3 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರು. 985 ಹಾಗೂ ಒಂದು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ ಮಾರಾಟ: ಬಂಧನ
ಧಾರವಾಡ: ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಹಲವರನ್ನು ಬಂಧಿಸಿದ್ದಾರೆ. ಕಲಘಟಗಿಯಿಂದ ಕಾರವಾರ ಮಾರ್ಗದ ರಸ್ತೆಯ ಬದಿಯಲ್ಲಿನ ಭಾರತ ದಾಭಾ ಹತ್ತಿರ ಮದ್ಯ ಮಾರಾಟ ಮಾಡುತ್ತಿದ್ದ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಪರಶುರಾಮ ಲಮಾಣಿ ಹಾಗೂ ನಿತ್ಯಾನಂದ ಲಮಾಣಿ ಎಂಬುವವರನ್ನು ಮಂಗಳವಾರ ಬಂಧಿಸಿ ಅವರಿಂದ ಸುಮಾರು ರು. 20,320 ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಗರಗ ಠಾಣಾ ವ್ಯಾಪ್ತಿಯ ಮುಮ್ಮಿಗಟ್ಟಿ ಗ್ರಾಮದ ದೇವಸ್ಥಾನವೊಂದರ ಹತ್ತಿರ ಮದ್ಯ ಮಾರಾಟ ಮಾಡುತ್ತಿದ್ದ ಚಿಕ್ಕಮಲ್ಲಿಗವಾಡದ ಸುರೇಶ ಕುರಬೆಟ್ಟ ಎಂಬಾತನ್ನು ಬಂಧಿಸಿದ ಗರಗ ಪೊಲೀಸರು ಆತನಿಂದ ರು. 2,300 ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಸ್.ಲೋಕೇಶಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

