ಚುನಾವಣಾ ವೆಚ್ಚ ವೀಕ್ಷಕರ ನೇಮಕ
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮಕ್ವಾನಾ ಭಾವನಾಬೆನ್ ಅವರನ್ನು ಚುನಾವಣಾ ಆಯೋಗ ಚುನಾವಣಾ ವೆಚ್ಚದ ವೀಕ್ಷಕರನ್ನಾಗಿ ನೇಮಿಸಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚ ನೋಡಿಕೊಳ್ಳುವ ಲೆಕ್ಕಪತ್ರ ಅಧಿಕಾರಿಗಳ ತಂಡದ ಜೊತೆ ಚರ್ಚಿಸಿದ ಮಕ್ವಾನಾಬೇನ್, ಅಭ್ಯರ್ಥಿಗಳ ಚುನಾವಣಾ ವೆಚ್ಚದ ಲೆಕ್ಕ ಇಡುವ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ, ಚುನಾವಣಾ ವೆಚ್ಚ ನಿರ್ವಹಣೆ ಕುರಿತು ತಾಲೂಕು ಮಟ್ಟದಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚ ನೋಡಿಕೊಳ್ಳುವ ಸಹಾಯಕ ವೆಚ್ಚದ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ಚುನಾವಣಾ ವೆಚ್ಚದ ವಿಭಾಗದ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರಮಾಣೀಕರಣ ಮತ್ತು ನಿರ್ವಹಣಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿದರು. ಚುನಾವಣೆಯಲ್ಲಿ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ವೆಚ್ಚವನ್ನು ವಸ್ತುನಿಷ್ಠವಾಗಿ ಲೆಕ್ಕ ಇಡುವ ಬಗ್ಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವೆಚ್ಚದ ಅಧಿಕಾರಿ ಎಂ.ಎಸ್. ಜಯರಾಂ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಧನರಾಜ್ ಇದ್ದರು.
ಜಿಲ್ಲೆಗೆ ಸಾಮಾನ್ಯ ವೀಕ್ಷಕರ ನೇಮಕ
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಪಾಲನೆ ಸೇರಿದಂತೆ ವಿವಿಧ ವಿಷಯಗಳ ಮೇಲ್ವಿಚಾರಣೆಗಾಗಿ ಮಣಿಪುರ ರಾಜ್ಯದ ಹಿರಿಯ ಅಧಿಕಾರಿ ಬಿ.ಬಿ. ಶರ್ಮಾ ಅವರನ್ನು ಸಾಮಾನ್ಯ ವೀಕ್ಷಕರನ್ನಾಗಿ ಚುನಾವಣಾ ಆಯೋಗ ನೇಮಿಸಿದೆ. ಬಿ.ಬಿ. ಶರ್ಮಾ ಅವರು ಇದೇ ಮಾ. 25ಕ್ಕೆ ಕ್ಷೇತ್ರಕ್ಕೆ ಆಗಮಿಸಲಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಚುನಾವಣಾ ಸಂವಾದ
ಧಾರವಾಡ: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಜೆಷನ್ ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೆಷನ್‌ನಿಂದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಮಗೆ ಎಂತಹ ರಾಜಕೀಯದ ಅವಶ್ಯಕತೆಯಿದೆ ಸಮಾಜದಲ್ಲಿ ಹದಗೆಟ್ಟಿರುವ ವ್ಯವಸ್ಥೆಗೆ ಮತ್ತು ಹೆಚ್ಚುತ್ತಿರುವ ಸಮಸ್ಯೆಗಳಿಗೆ ಕಾರಣಗಳೇನು ಈ ವಿಷಯಗಳ ಬಗ್ಗೆ ಮಾ. 21ರ ಬೆಳಗ್ಗೆ 11ಕ್ಕೆ ಮುಕ್ತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11ಕ್ಕೆ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ನಡೆಯಲಿದೆ. ಸಂವಾದವನ್ನು ಹಿರಿಯ ರಾಜಕೀಯ ಚಿಂತಕ ಡಾ. ಕೆ. ರಾಘವೇಂದ್ರ ರಾವ್ ಉದ್ಘಾಟಿಸಲಿದ್ದು, ಅಂಕಣಕಾರ ಎಂ.ಕೆ. ಭಾಸ್ಕರ ರಾವ್, ಡಾ. ಶ್ಯಾಮಸುಂದರ ಬಿದರಕುಂದಿ, ಶಾರದಾ ದಾಬಡೆ, ಡಾ.ಎಂ.ಐ. ಶೇಖ್, ಡಾ.ಬಿ.ಆರ್. ಮಂಜುನಾಥ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ಬಿಜೆಪಿ ಕಾರ್ಯಕರ್ತರ ಸಭೆ
ಧಾರವಾಡ: ಬಿಜೆಪಿ ಧಾರವಾಡ ಗ್ರಾಮೀಣ ಭಾಗದ ಕಾರ್ಯಕರ್ತರ ಸಭೆ ಮಾ. 21ರ ಬೆಳಗ್ಗೆ 10ಕ್ಕೆ ಇಲ್ಲಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಪಕ್ಷದ ಅಭ್ಯರ್ಥಿ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಶಾಸಕರಾದ ಬಸವರಾಜ ಬೊಮ್ಮಾಯಿ, ಅರವಿಂದ ಬೆಲ್ಲದ, ಸೀಮಾ ಮಸೂತಿ, ಮಡಿವಾಳಪ್ಪ ಉಳವಣ್ಣವರ, ಈಶ್ವರ ಶಿವಳ್ಳಿ, ಸುನೀಲ ಗುಡಿ, ಶಿವಾನಂದ ಗುಂಡಗೋವಿ, ಟಿ.ಪಿ. ಅಷ್ಟಗಿ ಭಾಗವಹಿಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

