ಧಾರವಾಡ

ಏ. 5ರೊಳಗೆ ಪರಿಹಾರ ನೀಡದಿದ್ದರೆ ಪ್ರತಿಭಟನೆ

Published On :

ಅಣ್ಣಿಗೇರಿ:  ಕನಕ ಬಿಟಿ ಹತ್ತಿ ಬೀಜ ಬಿತ್ತಿ ಹಾನಿ ಅನುಭವಿಸಿದ ರೈತರಿಗೆ ಏ. 5ರೊಳಗಾಗಿ ಪರಿಹಾರ ವಿತರಿಸದಿದ್ದರೆ ಮಹಿಕೋ ಕಂಪನಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಅಣ್ಣಿಗೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯ ಪ್ರಕಾಶ ಅಂಗಡಿ ಎಚ್ಚರಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿ ಹೆಕ್ಟರ್‌ಗೆ ರು.  6 ಸಾವಿರ ಪರಿಹಾರ ನೀಡುವಂತೆ ಮಹಿಕೋ ಕಂಪನಿಗೆ ಸರ್ಕಾರ ಸೂಚನೆ ನೀಡಿದ್ದು, ಈ ವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ದೂರಿದ್ದಾರೆ.
ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಕಂಪನಿ ತಕ್ಷಣ, ರೈತರ ಸಂಕಷ್ಟ ಬಗೆಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ. ಕೃಷಿ ಇಲಾಖೆಯೇ ನೀಡಿರುವ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 11,250 ಅರ್ಜಿಗಳು ಸಲ್ಲಿಕೆಯಾಗಿದ್ದು, 13,500 ಹೆಕ್ಟರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ.
ನವಲಗುಂದ ತಾಲೂಕಿನಲ್ಲಿ ಅಣ್ಣಿಗೇರಿ ಹೋಬಳಿಯಲ್ಲಿ 1,455 ಅರ್ಜಿ 2,224 ಹೆಕ್ಟೇರ್ ಪ್ರದೇಶ ಹಾಗೂ ಮೊರಬ ಹೋಬಳಿಯಲ್ಲಿ 3,239 ಅರ್ಜಿಗಳು 3,139 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಅರ್ಜಿಯನ್ನು ಸಲ್ಲಿಸಿ ಮೂರು ತಿಂಗಳಾದರೂ ಇಲ್ಲಿಯವರೆಗೂ ಕಂಪನಿಯಿಂದ ಒಬ್ಬ ರೈತನಿಗೂ ಪರಿಹಾರವನ್ನೂ ನೀಡಿಲ್ಲ. ಕೂಡಲೇ ನಿಗದಿಗೊಳಿಸಿದ ನಷ್ಟ ಪರಿಹಾರವನ್ನು ಬಿಡುಗಡೆಗೊಳಿಸಬೇಕು. ಏಪ್ರಿಲ್ 5ರೊಳಗೆ ಪರಿಹಾರ ನೀಡದಿದ್ದಲ್ಲಿ ಜಿಲ್ಲಾ ಜಾಗೃತ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.