2-3 ತಿಂಗಳಲ್ಲಿ ಸುರಕ್ಷಿತ ಕೈಗಳಲ್ಲಿ ಭಾರತ
ಧಾರವಾಡ: ಇನ್ನು ಎರಡೇ ತಿಂಗಳಲ್ಲಿ ದೇಶವನ್ನು ಎಲ್ಲ ರಂಗಗಳಲ್ಲೂ ಸುರಕ್ಷಿತವಾಗಿರಿಸುವ ಸರ್ಕಾರ ಆಡಳಿತಕ್ಕೆ ಬರಲಿದೆ. ಭಾರತದ ಯೋಧನಿಗೆ, ಪ್ರಜೆಗೆ ತೊಂದರೆ ನೀಡುವ ದೇಶ ಭೂಪಟದ ಮೇಲೆ ಇರುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಶುಕ್ರವಾರ ಹಿಂದುಳಿದ ವರ್ಗಗಳ ಹಾಗೂ ಬಿಜೆಪಿ ಬೆಂಬಲಿಗರ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಒಳಗೆ ಕೋಮು-ಗಲಭೆ ನಡೆಯುತ್ತಿದ್ದರೂ ಕಾಂಗ್ರೆಸ್ ಸುಮ್ಮನೆ ಕುಳಿತಿದೆ. ಆದರೆ, ಸಮಾಜದ ಎಲ್ಲ ವರ್ಗಗಳ ಹಿತ ಕಾಯುತ್ತಿರುವ ಮೋದಿಯನ್ನು ನರಹಂತಕ ಎನ್ನುತ್ತಿದ್ದಾರೆ. ಗುಜರಾತ್ನಲ್ಲಿ ಮುಸ್ಲಿಂರು ಮೋದಿ ಅವರನ್ನು ಹೊಗಳಿ, ಸನ್ಮಾನಿಸುತ್ತಿದ್ದರೆ, ಕಾಂಗ್ರೆಸ್ ವೋಟ್ ಬ್ಯಾಂಕ್ ಕಳೆದುಕೊಳ್ಳುವ ಭಯದಲ್ಲಿ ಮೋದಿ ಚಾರಿತ್ರ್ಯ ವಧೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಪ್ರಹ್ಲಾದ ಜೋಶಿಯವರನ್ನು ಮತದಾರರು ಬೆಂಬಲಿಸುವಂತೆ ಕೋರಿದರು. ಸೋಮಣ್ಣ ಬೇವಿನಮರದ, ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ಸೀಮಾ ಮಸೂತಿ, ರಂಗಾ ಬದ್ಧಿ, ಮೋಹನ ರಾಮದುರ್ಗ, ಟಿ.ಪಿ. ಅಷ್ಟಗಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

