ಸಾಮೂಹಿಕ ವಿವಾಹದಿಂದ ಸಾಮರಸ್ಯ: ಶಿಥಿಕಂಠೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ, ಕುಂದಗೋಳ, ಮೇ 2
ಸಾಮೂಹಿಕ ವಿವಾಹಗಳು ದುಂದು ವೆಚ್ಚಕ್ಕೆ ಕಡಿವಾಣ ಹಾಕುತ್ತವೆಯಲ್ಲದೆ, ಸಾಮರಸ್ಯ ಬೆಸೆಯಲು ಉತ್ತಮ ವೇದಿಕೆಯೂ ಆಗಿವೆ ಎಂದು ಪಂಚಗ್ರಹ ಹಿರೇಮಠದ ಶ್ರೀ ಶಿಥಿಕಂಠೇಶ್ವರ ಸ್ವಾಮೀಜಿ ಹೇಳಿದರು.
ಶುಕ್ರವಾರ ಪಟ್ಟಣದ ಬಸವಣ್ಣಜ್ಜನವರ ಕಲ್ಯಾಣಪುರದಲ್ಲಿ ಬಸವ ಜಯಂತಿ ಅಂಗವಾಗಿ ನಡೆದ 27 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.
ಈ ಸಾಮೂಹಿಕ ವಿವಾಹದಿಂದ ಸುತ್ತಮುತ್ತಲಿನ ಗ್ರಾಮಗಳ ಮಧ್ಯಮ ವರ್ಗದ ಜನತೆಯ ಬಹಳಷ್ಟು ಅನುಕೂಲವಾಗಿದೆ. ಹೀಗೆ ನಿರಂತರವಾಗಿ ಕಲ್ಯಾಣಪುರದ ಉಚಿತ ಸಾಮೂಹಿಕ ವಿವಾಹಗಳು ಜರುಗಲಿ ಎಂದೂ ಶ್ರೀಗಳು ಶುಭ ಹಾರೈಸಿದರು.
ಕಲ್ಯಾಣಪುರದ ಶ್ರೀಗಳಾದ ಬಸವಣ್ಣಜ್ಜ, ಬಸವಣ್ಣಜ್ಜನವರು 38 ವರ್ಷಗಳ ಹಿಂದೆ ಪ್ರಾರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಬಂದಿದ್ದರು. ಅವರ ಹಾಕಿಕೊಟ್ಟ ಮಾರ್ಗದಲ್ಲೇ ತಾವೂ ಭಕ್ತರ ತನು ಮನ ಧನ ಸಹಕಾರದಿಂದ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.
ಶಿವಾನಂದ ಮಠದ ಶ್ರೀ ಬಸವೇಶ್ವರ ಸ್ವಾಮಿಗಳು ನೂತನ ದಂಪತಿಗಳಿಗೆ ಆಶೀರ್ವದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

